LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.....

ಅಮೀನಗಡ -

ಇದೊಂದು ಗ್ರಾಮೀಣ ಪ್ರದೇಶದ ಪುಟ್ಟದಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಈ ಒಂದು ಶಾಲೆಯ ಮಕ್ಕಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಯೊಂದರಲ್ಲಿ ಆಯ್ಕೆಯಾಗಿದ್ದಾರೆ.ಹೌದು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೇ ಸಾಕ್ಷಿ.ಶೈಕ್ಷಣಿಕ ಗುಣಮಟ್ಟದಲ್ಲಿ ಪ್ರಗತಿ ಸಾಧಿಸಿದೆ. ಸರ್ಕಾರಿ ಶಾಲೆಗಳ ಯಶೋಗಾಥೆ ಪ್ರಸ್ತುತಪಡಿಸುವ ವಿಡಿಯೊ ದಾಖಲೀಕರಣ ಸ್ಪರ್ಧೆಯಲ್ಲಿ ಚಿಕನಾಳ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ₹5 ಸಾವಿರ ನಗದು ಪುರಸ್ಕಾರದ ಜೊತೆಗೆ ದೆಹಲಿಯಲ್ಲಿ ನಡೆ ಯುವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವಕಾಶ ವನ್ನು ಈ ಒಂದು ಶಾಲೆ ಈಗ ಪಡೆದಿದೆ.

ಸರ್ಕಾರದ ಅನುದಾನದ ಹೊರತಾಗಿ ಶಾಲೆಯು ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ದೇಣಿಗೆ ಪಡೆದು ಕೊಂಡಿದೆ. ಧಾರವಾಡ ವಲಯದ ರಾಜ್ಯ ಶಾಲಾ ನಾಯಕತ್ವ, ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣೆ ಸಂಸ್ಥೆಯ (ಸಿಸ್ಲೆಪ್) ಮಾರ್ಗದರ್ಶನದಲ್ಲಿ ಶಾಲೆಯ ಸಮಗ್ರ ಅಭಿವೃದ್ಧಿ ಮತ್ತು ಗುಣಮಟ್ಟದ ಕುರಿತು ವಿಡಿಯೊ ದಾಖಲೀಕರಣ ಮಾಡಲಾಗಿದೆ.ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಪ್ರಥಮ ಸ್ಥಾನ ಪಡೆದು ಇಳಕಲ್ ಡಯೆಟ್‌ನಿಂದ ಶಿಫಾರಸುಗೊಂಡು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಚಿಕನಾಳ ಪ್ರಾಥಮಿಕ ಶಾಲೆ ಶಾಲಾ ಅಭಿವೃದ್ಧಿ ಯೋಜನೆ ಮತ್ತು ಶಾಲಾ ಸಂಸ್ಕೃತಿ ವಿಷಯದ ಬಗ್ಗೆ ಮಂಡಿಸಿದ ಯಶೋಗಾಥೆಯ ವಿಡಿಯೊ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಭಾಗವಹಿಸುವ ಅರ್ಹತೆಯನ್ನು ಈಗ ಪಡೆದಿದೆ.

ಶಾಲೆಯ ಗುಣಮಟ್ಟ, ಅಭಿವೃದ್ಧಿ, ಶಾಲಾ ಪರಿಸರ, ಸ್ವಚ್ಛತೆ, ಶೌಚಾಲಯ, ಸಂಸ್ಕೃತಿ, ಶೈಕ್ಷಣಿಕ ಚಟುವ ಟಿಕೆ, ಸಹಭಾಗಿತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಎಸ್.ಡಿ.ಎಂ.ಸಿ ಸಹಕಾರ, ಶಿಕ್ಷಕರ ಕಾರ್ಯಗಳು ಹಾಗೂ ಇಲಾಖಾ ಮೇಲಧಿಕಾರಿಗಳ ಸಂದರ್ಶನ ಆಧಾರದ ಮೇಲೆ ಈ ಆಯ್ಕೆ ಪ್ರಕ್ರಿಯೆ ನಡೆಯು ತ್ತದೆ.ಆ ಕುರಿತು ಆರು ನಿಮಿಷಗಳ ವಿಡಿಯೊ ಚಿತ್ರೀ ಕರಣ ಮಾಡಿ ಸಿಡಿಯಲ್ಲಿ ದಾಖಲಿಸಲಾಗಿರು ತ್ತದೆ ಒಟ್ಟಾರೆ ರಾಜ್ಯದ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯೊಂದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು ಸಂತೋಷದ ವಿಚಾರವಾಗಿದ್ದು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಒಳ್ಳೆಯದಾಗಲಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....