ಬೆಂಗಳೂರು -
ಕೆಪಿಎಸ್-ಮ್ಯಾಗ್ನೆಟ್ ನೀತಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಸಾಲದ ಒಪ್ಪಂದದ ಮೂಲಕ ರಾಜ್ಯದ 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ಎಐಡಿಎಸ್‌ಒ ಆರೋಪಿಸಿವೆ.ಸಮಿತಿಯ ರಾಜ್ಯಾಧ್ಯಕ್ಷ ಪ್ರೊ. ಎ.ಮುರಿಗೆಪ್ಪ ಹೇಳಿಕೆ ಬಿಡುಗಡೆ ಮಾಡಿ, ನ.4 ರಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮೊದಲ ಹಂತವಾಗಿ 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಒಪ್ಪಂದ ಮಾಡಿಕೊಳ್ಳ ಲಾಗಿದೆ ಎಂದು ಆರೋಪಿಸಿದ್ದಾರೆ.
ಪ್ರತಿ ಸಂಸ್ಥೆಗೆ ಮೂರು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದ್ದು ಅಭಿವೃದ್ಧಿಪಡಿಸಿದ ಶಾಲೆಗಳಿಗೆ ಸಂಸ್ಥೆಗಳ ಹೆಸರಿಡಲು ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಶಿಕ್ಷಕರ ನಿಯೋಜನೆ, ಬಸ್, ಪ್ರಯೋಗಾ ಲಯ ಮತ್ತು ಕಂಪ್ಯೂಟರ್ ಸೌಲಭ್ಯಗಳನ್ನೂ ನೀಡುವ ಪ್ರಸ್ತಾವವಿದೆ ಎಂದಿದ್ದಾರೆ.ಶಿಕ್ಷಕರ ಕೊರತೆ ನೀಗಿಸಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಸರ್ಕಾರದ ಜವಾಬ್ದಾರಿ. ಅದನ್ನು ಖಾಸಗಿಯವರಿಗೆ ವಹಿಸು ವುದು ಸರಿಯಲ್ಲ. ನೀತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಸುಮಾರು 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಆಡಳಿತ ಮಂಡಳಿಗಳಿಗೆ ದತ್ತು ನೀಡಲು ಸರ್ಕಾರ ಸಿದ್ಧತೆ ನಡೆಸಿರುವುದು ಆಘಾತಕಾರಿಇದು ಸರ್ಕಾರದ ಆರ್ಥಿಕ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ ಬಡ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗುವ ಈ ಕ್ರಮವನ್ನು ಖಂಡಿಸುತ್ತೇವೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....