ವಾಡಿ -
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ ಹೌದು ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗುಂಡಪ್ಪಾ ಭಂಕೂರ ಅವರಿಗೆ ವಾಡಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ PMK Fans Club ವತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡುತ್ತಿರುವ ಕೊಡುಗೆ ಹಾಗೂ ಶಾಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವುದನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷರಾದ ಮಹೇಮೂದ್ ಸಾಹೇಬ ಚಿಸ್ತಿ ಅವರು ಗುಂಡಪ್ಪಾ ಭಂಕೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿ ಸಿದರು.
ಪ್ರಶಸ್ತಿ ಸ್ವೀಕರಿಸಿದ ಗುಂಡಪ್ಪಾ ಭಂಕೂರ ಅವರು ಈ ಗೌರವವು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಇನ್ನಷ್ಟು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಪ್ರೇರಣೆ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸಿರುವ PMK Fans Club ಆಯೋಜಕರಿಗೆ, ಗಣ್ಯರಿಗೆ ಹಾಗೂ ತಮ್ಮನ್ನು ಅಭಿನಂದಿಸಿದ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಶಿಕ್ಷಣಾಭಿಮಾನಿಗಳು ಶಿಕ್ಷಕರು, ಗಣ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗುಂಡಪ್ಪಾ ಭಂಕೂರ ಅವರಿಗೆ ಅಭಿನಂದನೆ ಸಲ್ಲಿಸಿದರು.
ಸುದ್ದಿ ಸಂತೆ ನ್ಯೂಸ್ ವಾಡಿ.....