LIVE TV LocalCrimeNationalInternationalPoliticsEducationTechnologyEntertainmentSportsFeature
State News

"FDA" ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರು ಇವರೇ........

ಬೆಂಗಳೂರು -

FDA ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ ಆರೋಪಿಗಳ ಬಂಧನವಾಗಿದೆ‌.ಕಾರ್ಯಾಚರಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.ಕೆಪಿಎಸ್ ಸಿ ನಡೆಸುವ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಆರೋಪಿಗಳನ್ನ ಬಂಧನ ಮಾಡಲಾಗಿದೆ.ಪೇಪರ್ ಲೀಕ್ ಮಾಡಿದ್ದ ಆರೋಪಿಗಳಾದ ರಾಚಪ್ಪ ,ಚಂದ್ರು ಸೇರಿ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧನವಾಗಿರುವ ರಾಚಪ್ಪ ,ಚಂದ್ರು

ಮೊದಲು ಎಫ್ ಡಿಎ ಪರೀಕ್ಷೆಯ ಒಂದು ಪೇಪರನ್ನು ಪೊಲೀಸರು ವಶಕ್ಕೆ ಪಡೆದು ಆಯೋಗದ ಅಧಿಕಾರಿಗಳಿಗೆ ಕಳಿಸಿದ್ರು.ಆಯೋಗ ಇದೇ ಪತ್ರಿಕೆ ಎಂದು ತಿಳಿಸಿದಾಗ ಸೋರಿಕೆಯಾಗಿರೋದು ಗೊತ್ತಾಗಿದೆ.ಕೂಡಲೇ ಆರೋಪಿಗಳು ಪತ್ರಿಕೆ ಸೋರಿಕೆ ಮಾಡಿ ಮಾರಾಟ ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಟೀಮ್ ಆರೋಪಿಗಳನ್ನು ಬಂಧಿಸಿದೆ.

ಸದ್ಯ ಕಾರ್ಯಾಚರಣೆ ಮಾಡಿದ ಸಿಸಿಬಿ ಪೊಲೀಸರು ಆರು ಜನರನ್ನು ವಶಕ್ಕೆ ತೆಗೆದುಕೊಂಡು ಅದರಲ್ಲಿ ಸಧ್ಯ ಇಬ್ಬರನ್ನು ಬಂಧಿಸಿದ್ದಾರೆ‌. 24 ಲಕ್ಷ ಹಣ ,3 ವಾಹನಗಳು ಸಿಸಿಬಿ ವಶಕ್ಕೆ ಪಡೆದಿದ್ದು,ಪೇಪರ್ ಲೀಕ್ ಆಗಿರುವ ಬಗ್ಗೆ 'ಕೆಪಿಎಸ್' ಸಿಗೆ ಮಾಹಿತಿ ನೀಡಿದ್ದಾರೆ.

ಅತ್ತ ಸಿಸಿಬಿ ಪೊಲೀಸರಿಂದ ಮಾಹಿತಿ ಬರುತ್ತಿದ್ದಂತೆ ಇತ್ತ ನಾಳೆ ನಡೆಯಬೇಕಿದ್ದ FDA ಪರೀಕ್ಷೆಯನ್ನು ಲೋಕಸೇವಾ ಆಯೋಗ ಮುಂದೂಡಿದೆ.

ಒಟ್ಟು 1114 ಹುದ್ದೆ ಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.3 ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದರು. ಏನೇ ಆಗಲಿ ಇನ್ನೇನು ದಿನ ಬೆಳಗಾದರೆ ಪರೀಕ್ಷೆ ಇತ್ತು ಎಲ್ಲಾ ಸಿದ್ದತೆ ನಡೆಸಿದ್ದರು ಇವೆಲ್ಲದರ ನಡುವೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....