ಬಂಟ್ವಾಳ -
ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತ ದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ರಾಗಿದ್ದಾರೆ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯ ದಲ್ಲಿ ತೀವ್ರ ಶೋಕ ಮೂಡಿಸಿದೆ.
ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿ ಯಾಗಿದ್ದ ವನಿತಾ ಶೆಟ್ಟಿಗಾರ್ ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿ ಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ ಇನ್ನೂ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾ ಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.
ಸುದ್ದಿ ಸಂತೆ ನ್ಯೂಸ್ ಬಂಟ್ವಾಳ.....