ಬೆಂಗಳೂರು -
ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆ-2026ರ ಮತದಾನ ಪ್ರಕ್ರಿಯೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುವ ಶಾಲಾ-ಕಾಲೇಜುಗಳಿಗೆ ಅ.22 ಮತ್ತು ಅ.23ರಂದು ಎರಡು ದಿನ ರಜೆ ಘೋಷಿಸ ಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 43 ಮತಗಟ್ಟೆಗಳನ್ನು ಶಾಲಾ-ಕಾಲೇಜುಗಳಲ್ಲಿ ಸ್ಥಾಪಿಸಲಾಗಿದ್ದು, ಚುನಾವಣಾ ಕಾರ್ಯ ಸುಗಮವಾಗಿ ನಡೆಯಲು ಅನುಕೂಲವಾ ಗುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕಾಂತರಾಜು ಪಿ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....