LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ಕಾಲೇಜುಗಳಿಗೆ ರಜೆ - ಜಿಲ್ಲಾಧಿಕಾರಿ ರಜೆ ಘೋಷಣೆ ಆದೇಶ......

ಬೆಂಗಳೂರು -

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಗುರುವಾರ (ಜುಲೈ 23) ರಂದು ದಕ್ಷಿಣ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಕರಾವಳಿ ಮೂರು ಜಿಲ್ಲೆಗಳಲ್ಲಿ ಕೆಲವು ದಿನಗಳಲ್ಲಿ ಭಾರೀ ಮಳೆ ಆಗುತ್ತಿದೆ. ಜುಲೈ 23ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಕನಿಷ್ಠ 115 ರಿಂದ 200 ಮಿಲಿ ಮೀಟರ್ ವರೆಗೆ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸ ದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಜೊತೆಗೆ ಆದೇಶದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗ ದಂತೆ ಪಾಲಕರು ಜಾಗ್ರತೆ ವಹಿಸಬೇಕು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚಿಸಿದ್ದು, ಉಲ್ಲಂಘಿ ಸಬಾರದು.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿ ಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಇನ್ನೂ ಈ ಭಾಗಕ್ಕೆ ಬರುವ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ನಿರ್ದೇಶನವಿರುತ್ತದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...