LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಸ್ಟಮರ್ ಸ್ಯಾಟಿಸ್ಪ್ಯಾಕ್ಷನ್ ಸರ್ವೆಯಲ್ಲಿ ಸ್ಥಾನ ಗಳಿಸಿಕೊಂಡ ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ -

ಲಾಕ್ ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ವಿಮಾನ ಪ್ರಯಾಣ ಆನ್ ಲಾಕ್ ನಿರ್ದೇಶನದ ಮೇರೆಗೆ ಪ್ರಯಾಣ ಪ್ರಾರಂಭ ಮಾಡಿದ್ದು, ಹುಬ್ಬಳ್ಳಿಯ ವಿಮಾನ ನಿಲ್ದಾಣ ಈಗ ದೇಶದಲ್ಲಿಯೇ ಪ್ರಮುಖ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಸೇರಿದ್ದು,ದಕ್ಷಿಣ ವಲಯದ ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಮೂರನೇ ಸ್ಥಾನದಲ್ಲಿದೆ.

ಹೌದು..ಸುಧಾರಣೆ ಎಂಬುವುದು ಮುಂದುವರಿದ ಪ್ರಕ್ರಿಯೆಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಯಾಣಿಕರ ಸಂತೋಷಕ್ಕಾಗಿ ಬದ್ಧವಾಗಿದ್ದು, ಪ್ರಯಾಣಿಕರನ್ನು ನೋಡಿಕೊಳ್ಳಲು ಹಾಗೂ ಗುಣಮಟ್ಟದ ಸೇವೆಯನ್ನು ನೀಡುವಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಜನಪ್ರಿಯತೆ ಪಡೆದಿದೆ.

ಇನ್ನೂ ಸಂತೃಪ್ತ ಗ್ರಾಹಕರ ಸರ್ವೆಯಲ್ಲಿ ಜುಲೈ - ಡಿಸೆಂಬರ್ 2020 ರ ಅವಧಿಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ದಕ್ಷಿಣ ವಲಯ ವಿಮಾನ ನಿಲ್ದಾಣಗಳಲ್ಲಿ 3 ನೇ ಸ್ಥಾನದಲ್ಲಿದೆ ಮತ್ತು ಭಾರತದಾದ್ಯಂತ 15 ನೇ ಸ್ಥಾನದಲ್ಲಿದೆ.

ಭಾರತದಲ್ಲಿ 56 ವಿಮಾನ ನಿಲ್ದಾಣಗಳೊಂದಿಗೆ ಸ್ಪರ್ಧಿಸಿದ ನಂತರ ಗ್ರಾಹಕ ತೃಪ್ತಿ ಸಮೀಕ್ಷೆ (ಸಿಎಸ್ಎಸ್) -2020. ವಿಮಾನ ನಿಲ್ದಾಣ ಪ್ರಾಧಿಕಾರಗಳು (ಎಎಐ) 2020 ರ ಜುಲೈ ಮತ್ತು ಡಿಸೆಂಬರ್ ನಡುವೆ ಪ್ರಯಾಣಿಕರೊಂದಿಗೆ ರೌಂಡ್- II ಸಮೀಕ್ಷೆಯನ್ನು ನಡೆಸಿತು.

ಒಟ್ಟಾರೆ ತೃಪ್ತಿ, ಪ್ರವೇಶ, ಪಾಸ್‌ಪೋರ್ಟ್ ನಿಯಂತ್ರಣ, ಭದ್ರತೆ, ಸೌಲಭ್ಯಗಳು, ಪರಿಸರ, ಸೇವೆಗಳು ಮತ್ತು ಪ್ರಯಾಣದ ವಿವರಗಳಂತಹ ಹಲವಾರು ನಿಯತಾಂಕಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ.

ಇನ್ನೂ ಈ ಕುರಿತು ಸುದ್ದಿ ಸಂತೆ ಮಾಹಿತಿ ನೀಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯವಸ್ಥಾಪಕ ಪ್ರಮೋದ್ ಠಾಕ್ರೆ, ರಾಜ್ಯದಲ್ಲಿ ಗ್ರಾಹಕರಿಗೆ ಗುಣಮಟ್ಟದ ವಿಮಾನ ಸೇವೆ ನೀಡುವಲ್ಲಿ ಸಾಕಷ್ಟು ಯೋಜನೆಯನ್ನು ಸರ್ಕಾರದ ನಿರ್ದೇಶನದ ಮೇರೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಡಲಾಗಿದೆ. ಅಲ್ಲದೆ ಈ ಎಲ್ಲ ಅಭಿವೃದ್ಧಿಗೆ ಗ್ರಾಹಕರ ಬೆಂಬಲವೇ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....