LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿಯಿಂದ ಶಿರಡಿ ಚೆನೈ ಗೆ ಬಸ್ ಆರಂಭ - ಸ್ಲೀಪರ್ ವೋಲ್ವೊ ಬಸ್ ಗಳು

ಹುಬ್ಬಳ್ಳಿ -

ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಎಂಟು ತಿಂಗಳಿಂದ ಸ್ಥಗಿತಗೊಂಡಿದ್ದ
ಹುಬ್ಬಳ್ಳಿಯಿಂದ ಮಹಾರಾಷ್ಟ್ರದ ಶಿರಡಿಗೆ ಎಸಿ ಸ್ಲೀಪರ್ ಬಸ್ ಗಳು ಆರಂಭ ಮಾಡಲಾಗಿದೆ. ಹಾಗೇ ತಮಿಳುನಾಡಿನ ಚೆನ್ನೈಗೂ ಕೂಡಾ ಬಸ್ ಗಳ ಸೇವೆ ಆರಂಭವಾಗಿದೆ. ಮಲ್ಟಿ ಆಕ್ಸಲ್ ವೋಲ್ವೋ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್ಸು ಗಳು ಹುಬ್ಬಳ್ಳಿಯ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾಸಂಸ್ಥೆ ಹುಬ್ಬಳ್ಳಿ ವಿಭಾಗದ ಅಧಿಕಾರಿಗಳು.ಶಿರಡಿಗೆ ಹೋಗುವ ಸ್ಲೀಪರ್ ಬಸ್ಸು ಸಂಜೆ 7 ಗಂಟೆಗೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಧಾರವಾಡ,ಬೆಳಗಾವಿ,ಪೂನಾ,ಅಹ್ಮದನಗರ ಮಾರ್ಗವಾಗಿ ಮರುದಿನ ಬೆಳಿಗ್ಗೆ 7-30ಕ್ಕೆ ಶಿರಡಿ ತಲುಪುತ್ತದೆ. ಶಿರಡಿಯಿಂದ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 7-30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ.ಇನ್ನೂ ಚೆನ್ನೈಗೆ ಹೋಗುವ ವೋಲ್ವೋ ಬಸ್ಸು ರಾತ್ರಿ 10-30ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಬೆಂಗಳೂರು, ಹೊಸೂರು, ಕೃಷ್ಣಗಿರಿ ಮಾರ್ಗವಾಗಿ ಮರುದಿನ ಮಧ್ಯಾಹ್ನ 1.30 ಕ್ಕೆ ಚೆನ್ನೈ ತಲುಪುತ್ತದೆ.

ಚೆನ್ನೈಯಿಂದ ಮಧ್ಯಾಹ್ನ 3-15ಕ್ಕೆ ಹೊರಟು ಮರುದಿನ ಬೆಳಗ್ಗೆ 7-00ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ.

ಮುಂಗಡ ಬುಕ್ಕಿಂಗ್,ರಿಯಾಯಿತಿ

ಈ ಬಸ್ಸುಗಳಿಗೆ ಆನ್
ಲೈನ್ ಮತ್ತು ಮುಂಗಡ ಬುಕ್ಕಿಂಗ್ ಕೌಂಟರುಗಳ ಮೂಲಕ ಮುಂಚಿತವಾಗಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವಾಗ 4 ಅಥವ 4 ಕ್ಕಿಂತ ಹೆಚ್ಚಿನ ಆಸನಗಳಿಗೆ ಒಂದೇ ಟಿಕೆಟ್ ಪಡೆದುಕೊಂಡರೆ ಮೂಲ ಪ್ರಯಾಣದರದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣಕ್ಕೆ ಆಸನಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೂ ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿಯಿಂದ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ,ಗೋವಾ,ಆಂದ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿಗೆ ವೋಲ್ವೋ,ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು.

ಅವುಗಳ ಪೈಕಿ ಇದುವರೆಗೆ 50 ಬಸ್ಸುಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಹಂತ ಹಂತವಾಗಿ ಇನ್ನುಳಿದ ಬಸ್ಸುಗಳ ಸಂಚಾರವನ್ನು ಮತ್ತೆ ಆರಂಭಿಸಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....