LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ - ಯೋಜನೆಯ Update ಮಾಹಿತಿ ಇಲ್ಲಿದೆ.....

ಬೆಂಗಳೂರು -

ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಮಹತ್ವದ ಪ್ರಕಟಣೆಯೊಂದನ್ನು ನೀಡಲಾಗಿದೆ ಹೌದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಬರುವ ಕುಂದು ಕೊರತೆಗಳ ಬಗ್ಗೆ ವಿಚಾರಿಸಲು ಸಂಪರ್ಕಿಸುವ ಕುರಿತು ಸುವರ್ಣ ಆರೋಗ್ಯ ಟ್ರಸ್ಟ್ ಮಹತ್ವದ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಪಟ್ಟಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದೂರವಾಣಿ ಸಂಖ್ಯೆ 9480819732 ಗೆ ಸರ್ಕಾರಿ ನೌಕರರು ಮತ್ತು ಅವಲಂಭಿತರು ಕರೆಮಾಡುತ್ತಿದ್ದು, ಸದರಿ ಸಂಖ್ಯೆಯು ನೋಂದಾಯಿತ ಆಸ್ಪತ್ರೆ ಇದೆಗಳಿಂದ ತುರ್ತು ರೋಗಿಗಳಿಗೆ ಚಿಕಿತ್ಸೆಗೂ ಮುನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಅನುಮತಿ ಪಡೆಯಲು ಮಾತ್ರ ಕರೆಮಾಡಲು ಸಿಮೀತವಾಗಿರುತ್ತದೆ.ಆದ್ದರಿಂದ ಸದರಿ ದೂರವಾಣಿ ಸಂಖ್ಯೆ 9480819732ಗೆ ಫಲಾನುಭವಿಗಳು ಕರೆಮಾಡದಂತೆ ತಿಳಿಸಿದೆ.

ಕರ್ನಾಟಕ ಸರ್ಕಾರಿ ನೌಕರರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಾಯವಾಣಿ : ಕರೆ ಮಾಡಲು 1800-425-8330 (24/7) ಹಾಗೂ What's up : 9480819777 ಸಂದೇಶ/ದೂರುಗಳನ್ನು ದಾಖಲಿಸಲು ಕೋರಿದೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು,

ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿ ದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.ಮಾಸಿಕ ವಂತಿಕೆ ಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು.

ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.

ಸರ್ಕಾರಿ ನೌಕರನ ಹಾಗು ಕುಟುಂಬದ ಅರ್ಹ ಸದಸ್ಯರ ಭಾವಚಿತ್ರಗಳು( ಪ್ರತಿಯೊಬ್ಬರ ಭಾವ ಚಿತ್ರವನ್ನು ಪ್ರತ್ಯೇಕವಾಗಿ ನೀಡತಕ್ಕದ್ದು, ಭಾವ ಚಿತ್ರದ ಮೇಲೆ ಸರ್ಕಾರಿ ನೌಕರ ತನ್ನ ಸಹಿ ಮತ್ತು ದಿನಾಂಕವನ್ನು ನಮೂದಿಸುವುದು ಮತ್ತು ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವ ಚಿತ್ರವನ್ನು ಒದಗಿಸತಕ್ಕದ್ದು)

ಸುದ್ದಿ ಸಂತೆ ನ್ಯೂಸ್ ಬೆಂಗಳೂರು....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....