ಶಿಡ್ಲಘಟ್ಟ -
ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಇಲ್ಲಿನ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲ ಈಶ್ವರ್ ರೆಡ್ಡಿ ಬಿ. ಅವರನ್ನು ಅಮಾನತು ಮಾಡಲಾಗಿದೆ.ಸೆ.26ರಂದು ಶಾಲೆಯ ಪ್ರಥಮ ಚಿಕಿತ್ಸೆ ಕೊಠಡಿಯಲ್ಲಿ ಪ್ರಭಾರ ಪ್ರಾಂಶು ಪಾಲರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬರು ದಿಬ್ಬೂರಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿದ್ದರು ಹೀಗಾಗಿ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಗಳಡಿ ಈಶ್ವರ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಶಿಡ್ಲಘಟ್ಟ.....