LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಿಮ್ಸ್ ಆಸ್ಪತ್ರೆಯಲ್ಲಿ ಬಹು ಕೋಟಿ ರೂಪಾಯಿ ವೆಚ್ಚದಲ್ಲಿನ ಕಟ್ಟಡಗಳು ಉದ್ಘಾಟನೆ

ಹುಬ್ಬಳ್ಳಿ -

ಪ್ರತಿಷ್ಠಿತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೂತನ ವಾಗಿ ನಿರ್ಮಿಸಿದ 19 ಕೋಟಿ ವೆಚ್ಚದ ಆಡಳಿತ ಭವನ, 2.8 ಕೋಟಿ ವೆಚ್ಚದ ಸ್ಕಿಲ್ ಲ್ಯಾಬ್, 6.88 ಕೋಟಿ ವೆಚ್ಚದ ಸುಸಜ್ಜಿತ ಹೃದ್ರೋಗ ಆಸ್ಪತ್ರೆ, 1.1 ಕೋಟಿ ವೆಚ್ಚದ ಆಧುನಿಕ ಶವಗಾರ, 1 ಕೋಟಿ ವೆಚ್ಚದ ರೆಟಿನಾ ಕ್ಲೀನಕ್ ಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ‌ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಸಿ ಜಡಿ, ಶಾಸಕರಾದ ಬಸವರಾಜ ಹೊರಟ್ಟಿ,

ಅಬ್ಬಯ್ಯ ಪ್ರಸಾದ್, ಸಿ.ಎಂ. ನಿಂಬಣ್ಣನವರ, ಕುಸುಮಾವತಿ‌ ಶಿವಳ್ಳಿ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ವೈದ್ಯಕೀಯ ಶಿಕ್ಷಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ನಿರ್ದೇಶಕ ಡಾ.ಪಿ.ಗಿರೀಶ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ,

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗ ಅಂಟರತಾನಿ,ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಪ್ರಾಂಶುಪಾಲ ಡಾ.ಎಂ.ಸಿ.ಚಂದ್ರು, ವೈದ್ಯಕೀಯ ಅಧೀಕ್ಷಕ ಡಾ.ರಾಜಶೇಖರ ದ್ಯಾಬೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇನ್ನೂ ಇಂದಿನಿಂದ ಬಹುಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಎಲ್ಲವೂ ಬಳಕೆಗೆ ದೊರೆಯಲಿದ್ದು ಸಾರ್ವಜನಿಕರು ಇವುಗಳನ್ನು ಸರಿಯಾಗಿ ಬಳಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗಣ್ಯರು ವಿನಂತಿ ಮಾಡಿಕೊಂಡರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...