LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪೊಲೀಸ್ ಸಿಬ್ಬಂದಿಗಳ ವಸತಿ ಗೃಹಗಳ ಉದ್ಘಾಟನೆ – ಹೊಸ ಪೊಲೀಸ್ ಠಾಣೆಗಳ ಶೀಘ್ರದಲ್ಲಿಯೇ ಮಂಜೂರು

ಚನ್ನಮ್ಮನ ಕಿತ್ತೂರು – ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಪೊಲೀಸ್ ವಸತಿ ಗೃಹಗಳನ್ನು ಬೆಳಗಾವಿಯ ಚನ್ನಮ್ಮ ಕಿತ್ತೂರಿನಲ್ಲಿ ಉದ್ಘಾಟಿಸಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮೊಯಿ ನೂತನವಾಗಿ ನಿರ್ಮಾಣಗೊಂಡ 24 ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿದ್ರು.

ಇದೇ ವೇಳೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಮಾತನಾಡಿ ‘ಈಗಿರುವ 300 ಪೊಲೀಸ್ ವಸತಿ ಗೃಹಗಳ ಸಂಖ್ಯೆಯನ್ನು 2025ರ ವೇಳೆಗೆ 350ಕ್ಕೆ ಹೆಚ್ಚಿಸಲಾಗುವುದು ಎಂದರು.

‘ಹೆಚ್ಚುವರಿಯಾಗಿ ನೀಡಲಾಗಿರುವ 50 ವಸತಿ ಗೃಹಗಳಲ್ಲಿ ಕಿತ್ತೂರಿಗೆ ಮತ್ತೆ 12 ಮನೆಗಳನ್ನು ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.‘ಹೊಸ ಪೊಲೀಸ್ ಠಾಣೆ ಸ್ಥಾಪನೆ ಮಾಡಬೇಕು ಎಂದು ಬೇಡಿಕೆ ಬಂದಿದೆ. ಸರ್ಕಾರ ಮಂಜೂರಾತಿ ನೀಡುವ ಸಂದರ್ಭದಲ್ಲಿ ಎಂ.ಕೆ. ಹುಬ್ಬಳ್ಳಿಯ ಉಪಠಾಣೆಯನ್ನು ಪೂರ್ಣ ಪ್ರಮಾಣದ ಠಾಣೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಇದಕ್ಕೆ 2 ಕೋಟಿ ನೀಡುವುದಾಗಿ ಶಾಸಕ ದೊಡ್ಡಗೌಡರ ಬೇಡಿಕೆಗೆ ಗೃಹ ಸಚಿವರು ಹೇಳಿದರು.

ಇನ್ನೂ ಇದೇ ವೇಳೆ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ‘ಕಿತ್ತೂರು ಪೊಲೀಸ್ ಠಾಣೆ ಕಟ್ಟಡ ತೀರಾ ಹಳೆಯದಾಗಿದೆ. ಹೊಸ ಕಟ್ಟಡ ನಿರ್ಮಿಸುವ ಅಗತ್ಯವಿದೆ. ಜೊತೆಗೆ ಸಂಚಾರ ಪೊಲೀಸ್‌ ಠಾಣೆಯನ್ನೂ ನೀಡಬೇಕೆಂದು ಒತ್ತಾಯವನ್ನು ಮಾಡಿದರು.ಇನ್ನೂ ಇದೇ ವೇಳೆ ಬೆಳಗಾವಿ ವಿಭಾಗದ ಕೆಲವು ಜಿಲ್ಲೆಗಳಲ್ಲಿ ನೆರೆ ಬಂದ ಸಂದರ್ಭದಲ್ಲಿ ಪೊಲೀಸರ ಅನುಭವ ಸಂಗ್ರಹಿಸಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರು ರಚಿಸಿರುವ ‘ಬಿಯಾಂಡ್ ರೆಡ್ ಅಲರ್ಟ್’ ಪುಸ್ತಕವನ್ನು ಗೃಹ ಸಚಿವರು ಬಿಡುಗಡೆ ಮಾಡಿದರು.

ಈ ಒಂದು ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹನುಮಂತ ಲಂಗೋಟಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಚನ್ನಮ್ಮ ಹೊಸಮನಿ, ಉಪಾಧ್ಯಕ್ಷ ಹೇಮಾವತಿ ಬೇಕವಾಡಕರ, ಎಎಸ್ ಪಿ. ಪ್ರದೀಪ ಗುಂಟಿ, ಸಿಪಿಐ ಮಂಜುನಾಥ ಕುಸುಗಲ್, ಎಸ್.ಐ. ದೇವರಾಜ ಉಳ್ಳಾಗಡ್ಡಿ, ವಿರಕ್ತಯ್ಯಾ ಸಾಲಿಮಠ, ಡಾ. ಬಸವರಾಜ ಪರವಣ್ಣವರ,

ಬಸನಗೌಡ ಸಿದ್ರಾಮನಿ, ಉಳವಪ್ಪ ಉಳ್ಳೇಗಡ್ಡಿ ಪೊಲೀಸ್ ಸಿಬ್ಬಂದಿಗಳಾದ ಭಾಸ್ಕರ ಪತ್ತಾರ ಲಗಮಪ್ಪ ಜಗಲವಾದಿ ಸೇರಿದಂತೆ ಕಿತ್ತೂರ ಪೊಲೀಸ್ ಠಾಣೆಯ ಹಲವು ಸಿಬ್ಬಂದಿಗಳು ಉಪಸ್ಥಿತರಿದ್ದರು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸ್ವಾಗತಿಸಿದರು. ಬಸವರಾಜ ಕುಪ್ಪಸಗೌಡ್ರ ನಿರೂಪಿಸಿದರು. ಪೊಲೀಸ್ ಅಧೀಕ್ಷಕ ಅಮರನಾಥ ರೆಡ್ಡಿ ವಂದಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....