LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಮೇಲೆ BEO ಗೆ ದೂರು ವರದಿ ನೀಡುವಂತೆ DDPI ಅಧಿಕಾರಿ ಗಳಿಗೆ ಸೂಚನೆ.....

ಕಡಬ -

ಶಿಕ್ಷಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಇಲ್ಲಿನ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.ಕಡಬ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಅಬ್ದುಲ್‌ ಖಾದರ್‌ ಅವರು ನಮ್ಮ ಮೇಲೆ ತರಗತಿಯಲ್ಲಿ ಹಲ್ಲೆ ನಡೆಸಿದ್ದು ಕುತ್ತಿಗೆ ಹಿಡಿದು ಕೆನ್ನೆಗೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅದರಿಂದಾಗಿ ಕುತ್ತಿಗೆ ನೋವಾಗಿದ್ದು ಕೆನ್ನೆ ಊದಿಕೊಂಡಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿ ಕಾರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.ಘಟನೆಯ ಕುರಿತು ಪ್ರತಿಕ್ರಿಯಿ ಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಅವರು ಪ್ರಕರಣ ನನ್ನ ಗಮನಕ್ಕೆ ಬಂದಿದೆ.ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಶಿಕ್ಷಣ ಸಂಯೋಜ ಕರಿಗೆ ಸೂಚನೆ ನೀಡಲಾಗಿದೆ.ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಚಿಂತಿಸಲಾಗುವುದು ಎಂದರು.

ಇತ್ತ ಆಸ್ಪತ್ರೆಗೆ ಭೇಟಿ ನೀಡಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಮುಖಂಡರು ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕನ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಜರಗಿಸಬೇಕು.ಅವರನ್ನು ಸೇವೆಯಿಂದ ವಜಾ ಮಾಡ ಬೇಕು ಎಂದು ಅಗ್ರಹಿಸಿ ಕಡಬ ತಹಶೀಲ್ದಾರ್‌ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...