LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಬೇರೆ ಹಣ ಸಂಗ್ರಹಿಸಿದರೆ ಶಿಸ್ತುಕ್ರಮ - ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಖಡಕ್ ಎಚ್ಚರಿಕೆ ಸಂದೇಶ.....

ಧಾರವಾಡ -

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಬೇರೆ ಹಣ  ಸಂಗ್ರಹಿಸಿದರೆ ಶಿಸ್ತುಕ್ರಮವನ್ನು ಕೈಗೊಳ್ಳಲಾಗು ತ್ತದೆ.ಅಕ್ಷರ ದಾಸೋಹ ಯೋಜನೆಯಡಿ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣು ಇಲ್ಲವೇ ಶೇಂಗಾಚೆಕ್ಕಿ ವಿತರಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಪಾಲಕ ರಿಂದ ಇಲ್ಲವೇ ಪೋಷಕರಿಂದ ಬೇರೆ ರೀತಿಯ ಹಣ ಸಂಗ್ರಹಕ್ಕೆ ಮುಂದಾದರೆ ಇಲಾಖಾ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಎಚ್ಚರಿಸಿದ್ದಾರೆ.

ಶಾಲಾ ಮಕ್ಕಳಿಗೆ ವಿತರಣೆ ಮಾಡುವ ಪ್ರತಿ ಮೊಟ್ಟೆ ಅಥವಾ ಬಾಳೆಹಣ್ಣು ಇಲ್ಲವೇ ಶೇಂಗಾಚೆಕ್ಕಿ ಖರೀದಿ ಸುವಾಗ ಸರಕಾರ ಪ್ರತೀ ವಿದ್ಯಾರ್ಥಿಗೆ ನಿಗದಿಗೊಳಿಸಿರುವ 6 ರೂ.ಗಳ ದರದ ಮಿತಿ ಯೊಳಗೇ ವೆಚ್ಚವನ್ನು ಭರಿಸುವಲ್ಲಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಯೋಜಿಸಬೇಕು. ಯಾವುದೇ ಕಾರಣಕ್ಕೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗಾಗಿ ಹೆಚ್ಚುವರಿ ಹಣವನ್ನು ವಿದ್ಯಾರ್ಥಿ ಗಳ ಪಾಲಕರು ಇಲ್ಲವೇ ಪೋಷಕರುಗಳಿಂದ ವಸೂಲಿ ಮಾಡಲು ಇಲಾಖಾ ನಿಯಮಾವಳಿ ಯಲ್ಲಿ ಅವಕಾಶವಿಲ್ಲದೇ ಇರುವುದನ್ನು ಶಾಲಾ ಮುಖ್ಯ ಶಿಕ್ಷಕರು ಮನಗಾಣಬೇಕು ಎಂದಿದ್ದಾರೆ.

ಕಠಿಣ ಕ್ರಮ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಗಾಗಿ ವಿದ್ಯಾರ್ಥಿಗಳ ಪಾಲಕರು ಇಲ್ಲವೇ ಪೋಷಕ ರುಗಳಿಂದ ಹೆಚ್ಚುವರಿ ಹಣವನ್ನು ಸಂಗ್ರಹಿಸಿದ ಬಗ್ಗೆ ಲಿಖಿತ ದೂರುಗಳು ಬಂದರೆ ಇಲಾಖಾ ವಿಚಾರಣೆ ನಡೆಸಲಾಗುತ್ತಿದ್ದು ಅದು ನಿಜಾಂಶ ಗಳಿಂದ ಸಾಬೀತಾದಲ್ಲಿ ಶಾಲಾ ಮುಖ್ಯ ಶಿಕ್ಷಕರು ಇಲ್ಲವೇ ಸಹ ಶಿಕ್ಷಕ-ಶಿಕ್ಷಕಿಯರು ಕಠಿಣ ಕ್ರಮಗ ಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ವಿಭಾಗದ ಬಾಗಲಕೋಟ, ವಿಜಯ ಪುರ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಹಾವೇರಿ ಹಾಗೂ ಗದಗ ಕಂದಾಯ ಜಿಲ್ಲೆಗಳು, ಜೊತೆಗೆ ಶಿರಸಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ ಶಾಲೆಗಳಿಗೆ ಆಕಸ್ಮಿಕ ಸಂದರ್ಶನ ನೀಡಿದ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ವಿದ್ಯಾರ್ಥಿಗಳ ಪಾಲಕ-ಪೋಷಕರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದಿದ್ದಾರೆ.

ಪ್ರತಿ ಬಿಇಓ ಹಾಗೂ ಡಿಡಿಪಿಐ ಅವರು ತಮ್ಮ ವ್ಯಾಪ್ತಿಯಲ್ಲಿಯ ಶಾಲೆಗಳಿಗೆ ಸಂದರ್ಶನ ನೀಡಿ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚೆಕ್ಕಿ ಖರೀದಿಗೆ ಸಂಬಂಧಿಸಿದಂತೆ ಸರಕಾರ ಪ್ರತೀ ವಿದ್ಯಾರ್ಥಿಗೆ ನಿಗದಿಗೊಳಿಸಿರುವ 6 ರೂ.ಗಳ ದರದ ಮಿತಿಯೊಳಗೇ ವೆಚ್ಚವನ್ನು ಭರಿಸಿದ ಬಗ್ಗೆ ಶಾಲಾ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ವಿಶೇಷ ಗಮನ ನೀಡಿ ತಪಾಸಣೆ ಮಾಡಬೇ ಕೆಂದು ಹೆಚ್ಚುವರಿ ಆಯುಕ್ತರಾದ ಜಯಶ್ರೀ ಶಿಂತ್ರಿ ಅವರು ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...