ಬೆಂಗಳೂರು -
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಕಾಗೋಡು ತಿಮ್ಮಪ್ಪ, ನಟ ಅಶೋಕ್ ಸೇರಿ 71 ಸಾಧಕರಿಗೆ ಒಲಿದ ಗೌರವ ಹೌದು 71ನೇ ಕನ್ನಡ ರಾಜ್ಯೋತ್ಸವದ ಅಂಗ ವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 71 ಮಂದಿ ಗಣ್ಯ ಸಾಧಕರಿಗೆ ರಾಜ್ಯ ಸರ್ಕಾರವು ಪ್ರತಿಷ್ಠಿತ 'ರಾಜ್ಯೋತ್ಸವ ಪ್ರಶಸ್ತಿ' ಯನ್ನು ಪ್ರಕಟಿಸಿದೆ ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಲಾ ಎಂ. ಅಧಿಕೃತ ಆದೇಶ ಹೊರಡಿಸಿದ್ದಾರೆ.
ಹಿರಿಯ ರಾಜಕಾರಣಿ ಹಾಗೂ ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ, ಖ್ಯಾತ ಹಿರಿಯ ನಟ ಅಶೋಕ್, ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ, ಫ್ಯಾಷನ್ ಗುರು ಪ್ರಸಾದ್ ಬಿದ್ದಪ್ಪ, ಬಾಡಿಬಿಲ್ಡರ್ 'ಜಿಮ್ ರವಿ' (ಎ.ವಿ. ರವಿ), ಮಾಜಿ ಮುಖ್ಯ ಕಾರ್ಯದರ್ಶಿ ತೆರೇಸಾ ಭಟ್ಟಾಚಾರ್ಯ ಸೇರಿದಂತೆ ನಾಡಿನ ಹಲವು ದಿಗ್ಗಜರು ಪ್ರಶಸ್ತಿಗೆ ಭಾಜನರಾಗಿದ್ದಾರೆ




ಈ ಬಾರಿಯ ಪ್ರಶಸ್ತಿಯಲ್ಲಿ ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ, ಹಳೆ ಮೈಸೂರು ಹಾಗೂ ಮಧ್ಯ ಕರ್ನಾಟಕ ಸೇರಿದಂತೆ ಎಲ್ಲಾ ಭಾಗಗಳ ಗಣ್ಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....