LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಖೋಟಾ ನೋಟು ಜಾಲ ಪತ್ತೆ - ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ - ನಾಲ್ಕು ಜನ ಆರೋಪಿಗಳ ಬಂಧನ......

ಹುಬ್ಬಳ್ಳಿ -

ಖೋಟಾ ನೋಟು ಜಾಲವನ್ನು ಹುಬ್ಬಳ್ಳಿಯಲ್ಲಿ ಕೇಶ್ವಾಪೂರ ಪೊಲೀಸರು ಪತ್ತೆ ಹಚ್ಚಿದ್ದಾರೆ‌. ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಖೋಟಾ ನೋಟು ಜಾಲವನ್ನು ಪೊಲೀಸರು ಪತ್ತೆ ಹಚ್ಚಿ ಮೂವರು ಪ್ರಮುಖವಾದ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪೂರ ಠಾಣಾ ಹದ್ದಿಯಲ್ಲಿ 04 ಜನರು ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ಮಾಡಲಾಗಿದೆ.

ಕೆ. ರಾಮ್‍ರಾಜನ್, ಉಪ ಪೊಲೀಸ್ ಆಯುಕ್ತರು, ಮತ್ತು ಆರ್ ಬಿ ಬಸರಗಿ, ಉಪ ಪೊಲೀಸ್ ಆಯುಕ್ತರು, ಹುಬ್ಬಳ್ಳಿ-ಧಾರವಾಡ ರವರ ಮಾರ್ಗದರ್ಶನದಲ್ಲಿ ಕೇಶ್ವಾಪೂರ ಪೊಲೀಸ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಜಿ ಕುಂಬಾರ ಮತ್ತು ಸಿಬ್ಬಂದಿ ತಂಡವು ಕಾರ್ಯಾಚರಣೆ ಮಾಡಿ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ಗೋಪಿನಾಥ ಜಗನ್ನಾಥ ಹಬೀಬ. ಹುಬ್ಬಳ್ಳಿ.
ಶ್ರೀನಿವಾಸ ವಾಸಪ್ಪ ತಟ್ಟಿ, ಹಳೇಹುಬ್ಬಳ್ಳಿ. ಮೌಲಾಸಾಬ ಮುಕ್ತಂಸಾಬ ಗೂಡಿಹಾಳ, ದೇವರಗುಡಿಹಾಳ.ಸಲಿಂ ಇಮಾಮಸಾಬ ಮುಲ್ಲಾ ಹಳೇಹುಬ್ಬಳ್ಳಿ ಬಂಧಿತರಾಗಿದ್ದಾರೆ.

ಇವರು 500 ರೂ ಮುಖ ಬೆಲೆಯ 93 ಖೋಟಾ ನೋಟುಗಳನ್ನು ಹಾಗೂ 100 ರೂ ಮುಖ ಬೆಲೆಯ 200 ಖೋಟಾ ನೋಟುಗಳನ್ನು ( ಒಟ್ಟು 66,500-00 ರೂ ಮೌಲ್ಯದ ಖೋಟಾ ನೋಟುಗಳನ್ನು) ಹಾಗೂ 500 ರೂ ಮುಖ ಬೆಲೆಯ 10 ಅಸಲಿ ನೋಟುಗಳನ್ನು ಮತ್ತು 100 ರೂ ಮುಖ ಬಲೆಯ 02 ಅಸಲಿ ನೋಟುಗಳನ್ನು ( ಒಟ್ಟು 5200-00 ರೂ ಮೌಲ್ಯದ ಅಸಲಿ ನೋಟುಗಳನ್ನು) ವಶಪಡಿಸಿಕೊಳ್ಳಲಾಗಿದೆ‌.

ಅಲ್ಲದೆ ಸದರಿ ಆರೋಪಿತರಿಂದ 04 ವಿವಿಧ ಕಂಪನಿಯ ಮೊಬೈಲ್ ಪೋನ್ ಸಹ ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜಪಡಿಸಿದ್ದಾರೆ. ಸದರಿ ಆರೋಪಿತರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರೆಸಿದ್ದಾರೆ.ಇನ್ನೂ ಈ ಪ್ರಕರಣವನ್ನು ಪತ್ತೆ ಹಚ್ಚಿದ ಕೇಶ್ವಾಪೂರ ಪೊಲೀಸ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಜಿ ಕುಂಬಾರ ಮತ್ತು ಸಿಬ್ಬಂದಿಯವರ ಕಾರ್ಯವೈಖರಿಗೆ ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ಇವರು ಶ್ಲಾಘಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...