LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮಸ್ಯೆ ಗಳ ಕುರಿತು ಇಲಾಖೆಯ ಆಯುಕ್ತರ ಭೇಟಿಯಾದ KSPSTA ಟೀಮ್.....

ಬೆಂಗಳೂರು -

ಶಿಕ್ಷಕರ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ
ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ
ಹೌದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಶಿಕ್ಷಕರ ವಿವಿಧ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ಮನವಿ ಸಲ್ಲಿಸಿದರು.

news_1791294682_0_397.webp

ಶಿಕ್ಷಕರ ಸೇವಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವುದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸು ವುದು, ಶಿಕ್ಷಕರ ನಿಯೋಜನೆ ಹಾಗೂ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ವಿಚಾರಗಳನ್ನು ಅಧಿಕಾರಿ ಗಳ ಗಮನಕ್ಕೆ ತರಲಾಯಿತು.

ಅಲ್ಲದೇ, ಶಿಕ್ಷಕರಿಗೆ ಸಂಬಂಧಿಸಿದ ಆಡಳಿತಾತ್ಮಕ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಶಾಲೆ ಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪದೋನ್ನತಿ ಮತ್ತು ಸೇವಾ ವಿಚಾರ ಗಳಲ್ಲಿ ವಿಳಂಬವಾಗದಂತೆ ಕ್ರಮವಹಿಸಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.ಶಿಕ್ಷಕರ ವರ್ಗಾವಣೆ, ಬಡ್ತಿ, ನಿಯೋಜನೆ ಹಾಗೂ ಸೇವಾ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಪಷ್ಟವಾದ ಕ್ರಮ ಕೈಗೊಂಡು, ಶಿಕ್ಷಕರಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟರು.

ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದ ಅಧಿಕಾರಿಗಳು, ಮನವಿಯಲ್ಲಿನ ವಿಷಯಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.ಶಿಕ್ಷಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು. ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಶಿಕ್ಷಕರ ಬೇಡಿಕೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು ಎಂಬುದು ಸಂಘದ ಪ್ರಮುಖ ಒತ್ತಾಯವಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
6ನೇ ತರಗತಿಯಿಂದ ಮಕ್ಕಳಿಗೆ AI ಪಾಠ....ಸರ್ಕಾರಿ ಶಾಲೆಗಳ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ.....ಮದ್ಯಮುಕ್ತ ಕಂದಕೂರಿನಲ್ಲಿ ಬೃಹತ್ ಪಾದಯಾತ್ರೆ.....ಪೊಲೀಸ್ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡರ ಟೀಮ್ ಜೊತೆ ಜನರ ಬೃಹತ್ ಜಾಗೃತಿ ನಡಿಗೆ.....ಬ್ಯಾಟ್ ನಿಂದ ಹೊಡೆದು ಮಗಳನ್ನು ಕೊಲೆ ಮಾಡಿದ ಶಿಕ್ಷಕ.....ಕೆರೆಯಲ್ಲಿ ಈಜಾಡಲು ಹೋಗಿ 6ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು.....ಶಿಕ್ಷಕರ ಸಮಸ್ಯೆ ಗಳ ಕುರಿತು ಇಲಾಖೆಯ ಆಯುಕ್ತರ ಭೇಟಿಯಾದ KSPSTA ಟೀಮ್.....ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ಕಾರಿ ನೌಕರರು.....40K ತಗೆದುಕೊಳ್ಳುವಾಗ ಲಾಕ್.....ಸರ್ಕಾರಿ ನೌಕರರಿಗೆ ಬೆದರಿಕೆ.....ಪೊಲೀಸರ ಬಲೆಗೆ ಬಿದ್ದ RTI ಕಾರ್ಯಕರ್ತ.....ಶಿಕ್ಷಕರ ವರ್ಗಾವಣೆ ಗೆ ಶಿಕ್ಷಣ ಸಚಿವರ ಸ್ಪಂದನೆ.....ಶಿಕ್ಷಣ ಸಚಿವರನ್ನು ಭೇಟಿಯಾದ ಶಿಕ್ಷಕರು.....ಶಿಕ್ಷಣ ಸಚಿವರ ಮನೆಯ ಮುಂದೆ ಶಿಕ್ಷಕರು.....ಪ್ರಭಾರಿ ಮುಖ್ಯಶಿಕ್ಷಕ ಅಮಾನತು..... ಅಮಾನತು ಮಾಡಿ ಆದೇಶ.....