LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಡ್ತಿ ಬೇಕಾ ಬೊಜ್ಜು ಕರಗಿಸಿ,ತೂಕ ಇಳಿಸಿ ಪೊಲೀಸರಿಗೆ KSRP ADGP ಗಡುವು......

ಬೆಂಗಳೂರು -

ಬೊಜ್ಜು ಕರಗಿಸಿ, ತೂಕ ಇಳಿಸದಿದ್ದರೆ, ಬಡ್ತಿ ಇಲ್ಲ.ಬಡ್ತಿ ಬೇಕಾದರೆ ಮೊದಲು ಬೊಜ್ಜು ಕರಗಿಸಿ ಇದರೊಂದಿಗೆ ತೂಕ ಇಳಿಸಿ ಹೀಗೆಂದು ರಾಜ್ಯ ಸಶಸ್ತ್ರ ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರು ತಮ್ಮ ಸಿಬ್ಬಂದಿಗಳಿಗೆ ನೀಡಿರುವ ಖಡಕ್ ಸೂಚನೆ.

ರಾಜ್ಯದ ಕೆಎಸ್‌ಆರ್‌ಪಿ, ಐಆರ್‌ಬಿ ಪಡೆಗಳು ಹಾಗೂ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದ ಅಗತ್ಯವಿದ್ದು, ಸರಾಸರಿ ತೂಕಕ್ಕಿಂತಲೂ 10 ಕೆಜಿ ಅಥವಾ ಅದಕ್ಕಿಂತಲೂ ಹೆಚ್ಚು ತೂಕವಿರುವ ಸಿಬ್ಬಂದಿಗಳು ತೂಕ ಇಳಿಸುವಂತೆ ಅಲೋಕ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.

ಸಿಬ್ಬಂದಿಗಳು ತೂಕ ಇಳಿಸುವ ಸಲುವಾಗಿ 5 ಕಿ.ಮೀ ಓಟ ಅಥವಾ ನಡುಗೆ ಹಾಗೂ ದೈಹಿಕ ಚಟುವಟಿ ಕೆಗಳನ್ನು ನಡೆಸಲಾಗುತ್ತದೆ.

ಇದರಿಂದ ಅಧಿಕ ತೂಕ ಇರುವ ಅಧಿಕಾರಿ ಮತ್ತು ಸಿಬ್ಬಂದಿ ಏ.30ರ ಒಳಗೆ ತೂಕ ಇಳಿಸಿ ಕೊಳ್ಳಬೇಕೆಂದು ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.

40 ವರ್ಷದೊಳಗಿನವರು 10 ಕೆಜಿ, 40 ರಿಂದ 50 ವರ್ಷದೊಳಗಿನವರು 5 ಕೆಜಿ, 50-55 ವರ್ಷದೊಳಗಿನವರು 2.5 ಕೆಜಿ ತೂಕ ಇಳಿಸಿಕೊಳ್ಳಬೇಕು ಎಂದು ಸೂಚನೆ ನೀಡಿರುವ ಅಲೋಕ್ ಕುಮಾರ್ ಅವರು ಸಿಬ್ಬಂದಿಗಳು ತೂಕ ಇಳಿಸಲು ಏಪ್ರಿಲ್ 30ರವರೆಗೂ ಗಡುವು ನೀಡಿದ್ದಾರೆಂದು ತಿಳಿದುಬಂದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....