LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಸಿಬಿ ಬಲೆಗೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್

ಚಾಮರಾಜನಗರ

ಮದುವೆ ಸಹಾಯಧನ ಮಂಜೂರು ಮಾಡಲು ಫಲಾನುಭವಿಯೊಬ್ಬರಿಂದ ಮೂರು ಸಾವಿರ ಲಂಚ ಪಡೆಯುತ್ತಿದ್ದ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕಿ ಹಾಗೂ ಕಂಪ್ಯೂಟರ್‌ ಆಪರೇಟರ್‌ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಕಾರ್ಮಿಕ ಇಲಾಖೆ ಕಚೇರಿಯ ಸೀನಿಯರ್ ಲೇಬರ್ ಇನ್ಸ್‌ಪೆಕ್ಟರ್ ಗೀತಾ, ಕಂಪ್ಯೂಟರ್ ಆಪರೇಟರ್ (ಹೊರಗುತ್ತಿಗೆ) ಮಾಲತಿ ಎಸಿಬಿ ಬಲೆಗೆ ಬಿದ್ದ ನೌಕರರಾಗಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಮದುವೆ ಸಹಾಯಧನ ನೀಡಲಾಗುತ್ತಿದ್ದು, ಇದನ್ನು ಪಡೆಯಲು ಅರ್ಜಿ ಸಲ್ಲಿಸಿದ್ದ ರಾಮಸಮುದ್ರದ ಫ್ಲಂಬರ್‌ ಕೆಲಸಗಾರ ಚೇತನ್ ಅವರಿಂದ ಗೀತಾ ಮತ್ತು ಮಾಲತಿ 3 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆರೋಪಿಗಳಾದ
ಗೀತಾ ,ಮಾಲತಿ ಅನ್ನು ಬಂಧಿಸಿದ್ದು, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ರಾಮಸಮುದ್ರದ ಚೇತನ್ 2020 ರಲ್ಲಿ ರೇಣುಕಾ ಎಂಬುವವರನ್ನು ವಿವಾಹವಾಗಿದ್ದು ಕಾರ್ಮಿಕ ಇಲಾಖೆಯಲ್ಲಿ ಮದುವೆ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಿದ್ದರು

ಈ ಸಂಬಂಧ ಕಾರ್ಮಿಕ ಇಲಾಖೆಯ ಕಂಪ್ಯೂಟರ್ ಆಪರೇಟರ್ ಮಾಲತಿ 2021ರ ಜ.21ರಂದು ಅರ್ಜಿದಾರ ಚೇತನ್‍ಗೆ ಕರೆ ಮಾಡಿ ಕಚೇರಿಗೆ ದಾಖಲೆಗಳನ್ನು ತರುವಂತೆ ಸೂಚಿಸಿದ್ದಾರೆ. ಜ.27ರಂದು ದಾಖಲೆಗಳನ್ನು ಮಾಲತಿ ಅವರಿಗೆ ಸಲ್ಲಿಸಿದಾಗ ಅವರು ಲೇಬರ್‌ ಇನ್ಸ್‌ಪೆಕ್ಟರ್ ಲತಾ ಅನ್ನು ಪರಿಚಯಿಸಿ ಮದುವೆ ಸಹಾಯಧನ ಮಂಜೂರು ಮಾಡಲು 3 ಸಾವಿರ ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂದು ಚೇತನ್ ಎಸಿಬಿಗೆ ದೂರು ನೀಡಿದ್ದರು.

ಮೈಸೂರು ದಕ್ಷಿಣ ವಲಯದ ಡಿವೈಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಸದಾನಂದ ಎ.ತಿಪ್ಪಣ್ಣವರ್ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...