LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾಜಿ ಶಾಸಕರ ಬಳಿ ಜೀವಂತ ಗುಂಡುಗಳು ಪತ್ತೆ .....!

ಬೆಂಗಳೂರು -

ಮಾಜಿ ಶಾಸಕರ ಬಳಿ ಜೀವಂತ ಗುಂಡುಗಳು ಪತ್ತೆಯಾದ ಘಟನೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಹೌದು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದ ಬಿಜೆಪಿಯ ಮುಖಂಡ, ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಮಾನಪ್ಪ ಡಿ. ವಜ್ಜಲ್ (60) ಅವರ ಬಳಿ ಜೀವಂತ ಗುಂಡುಗಳು ಪತ್ತೆಯಾಗಿವೆ.

ಮಾಜಿ ಶಾಸಕ ಮಾನಪ್ಪ ವಜ್ಜಲ್

ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ನಂತರ ವಿಚಾರಣೆ ಮಾಡಿದ ಪೊಲೀಸರು ಮಾಹಿತಿಯನ್ನು ಪಡೆದುಕೊಂಡು ವಿಚಾರಣೆ ಮಾಡಿ ಬಿಟ್ಟು ಕಳುಹಿಸಿದ್ದಾರೆ.ಡಿಸೆಂಬರ್ 16ರಂದು ಹೈದರಾಬಾದ್‌ಗೆ ಹೋಗಲು ಮಧ್ಯಾಹ್ನ 1 ಗಂಟೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅವರ ಬ್ಯಾಗನ್ನು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಬ್ಯಾಗ್‌ನಲ್ಲಿ 14 ಗುಂಡುಗಳು ಪತ್ತೆಯಾಗಿದ್ದವು ಎಂದು ವಿಮಾನ ನಿಲ್ದಾಣದ ಪೊಲೀಸ್ ಮೂಲಗಳು ಹೇಳಿವೆ.ನಂತರ ಮಾನಪ್ಪ ಅವರನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ, ಗಸ್ತು ವಾಹನದ ಪೊಲೀಸರಿಗೆ ಒಪ್ಪಿಸಿದ್ದರು.

ಮಾನಪ್ಪ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು. ಪಿಸ್ತೂಲ್ ಹಾಗೂ ಜೀವಂತ ಗುಂಡು ಇಟ್ಟುಕೊಳ್ಳಲು ಮಾನಪ್ಪ ಅವರು ಪರವಾನಗಿ ಪಡೆದಿರುವುದು ಗೊತ್ತಾಯಿತು. ನಂತರ, ಅವರ ಹೇಳಿಕೆ ಪಡೆದು ಬಿಟ್ಟು ಕಳುಹಿಸಲಾಯಿತು’ ಎಂದೂ ಮೂಲಗಳು ತಿಳಿಸಿವೆ.ಮಾನಪ್ಪ ಅವರು ರಾಯಚೂರು ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....