LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ರೀತಿಸಿ ಮದುವೆಗೆ ಸಿದ್ದವಾಗಿದ್ದ ಜೋಡಿಗೆ ಮಚ್ಚಿನೇಟು

ಚಾಮರಾಜನಗರ -

ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು. ಕ್ರೇಜಿಸ್ಟಾರ್ ರವಿಚಂದ್ರನ್ ಈ ಹಾಡು ಕೇಳುತ್ತಿದ್ದರೆ ಪ್ರೀತಿಸಬೇಕು ಪ್ರೀತಿಸಿದರೆ ಜಗಕೆ ಹೆದರಬಾರದು .ಹೌದು ಹೀಗೆ ಪ್ರೀತಿ ಮಾಡಿ ಯಾರಿಗೂ ಹೆದರದೆ ಮದುವೆಗೆ ಸಿದ್ದವಾಗಿದ್ದ ಜೋಡಿಯೊಂದಕ್ಕೇ ಮಚ್ಚಿನೇಟು ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿ ಮದುವೆಯಾಗಲು ಇಬ್ಬರು ಸಿದ್ಧವಾಗಿದ್ದರು.ಇನ್ನೇನು ಮದುವೆಗೆ ಎರಡು ದಿನಗಳು ಬಾಕಿ ಇರುವಾಗಲೇ ಜೋಡಿಗೆ ಮಚ್ಚಿನೇಟು ಹಾಕಲಾಗಿದೆ.

ಸತ್ಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಿ.ಜಿ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ.ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಅವರು ವಿರೋಧಿಸಿದ್ದರು. ಮನೆಯವರ ತೀವ್ರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಗೆ ಮುಂದಾಗಿದ್ದರು.

ಧನಲಕ್ಷ್ಮೀ

ಇದರಿಂದ ಸಿಟ್ಟಿಗೆದ್ದ ಮನೆಯವರು ಆಕೆಯ ತಂದೆ ಹಾಗೂ ಅಣ್ಣನೇ ಗಂಭೀರ ಹಲ್ಲೆ ಮಾಡಿದ್ದಾರೆ. ಗ್ರಾಮದ ಮೆಡಿಕಲ್ ಸ್ಟೋರ್ ಮುಂಭಾಗದಲ್ಲಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಧನಲಕ್ಷ್ಮೀ ಮೇಲೆ ಹಲ್ಲೆ ಮಾಡಲು ಆಕೆಯ ತಂದೆ ಶಿವಸ್ವಾಮಿ ಹಾಗೂ ಅಣ್ಣ ಮಹೇಂದ್ರ ಮಚ್ಚು, ಕುಡಗೋಲು ಹಿಡಿದು ಬಂದಿದ್ದರು. ಅಲ್ಲದೆ ಮೆಡಿಕಲ್ ಮುಂಭಾಗದಲ್ಲಿದ್ದ ಧನಲಕ್ಷ್ಮಿ ಮೇಲೆ ದಾಳಿ ಮಾಡಿ ಕುಡುಗೋಲಿನಿಂದ ಏಕಾಏಕಿ ಹಲ್ಲೆ ಮಾಡಿದ್ದಾರೆ.

ಹಲ್ಲೆಯ ಪರಿಣಾಮ ಯುವತಿ ಕೈಯ 4 ಬೆರಳುಗಳೇ ಕಟ್ ಆಗಿವೆ. ಸದ್ಯ ಯುವತಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಲ್ಲದೆ ಪ್ರಾಣ ರಕ್ಷಿಸುವಂತೆ ಅಳಲು ತೋಡಿಕೊಂಡಿದ್ದಾಳೆ ಪ್ರಕರಣ ಕುರಿತಂತೆ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....