LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಸಂತ್ರಸ್ತ ಯುವತಿಯ ಬದುಕಿಗೆ ನೆರವಾದ ಸಚಿವ ಡಾ ಕೆ ಸುಧಾಕರ್ ವಯಕ್ತಿಕವಾಗಿ 5 ಲಕ್ಷ ರೂಪಾಯಿ ನೆರವು ನೀಡಿ ಆತ್ಮ ಸ್ಥೈರ್ಯ ತುಂಬಿದ ಸಚಿವರು.....

ಬೆಂಗಳೂರು -

ಬೆಂಗಳೂರಿನ ಸುಂಕದಕಟ್ಟೆ ಬಳಿ ಆಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥ ಯುವತಿಯ ಆರೋಗ್ಯ ವನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ವಿಚಾರಣೆ ಮಾಡಿದರು.ಆಸ್ಪತ್ರೆಗೆ ತೆರಳಿ ವಿಚಾರಣೆ ಮಾಡಿದ ಸಚಿವರು ಯುವತಿಯೊಂದಿಗೆ ಮಾತನಾಡಿ ಧೈರ್ಯ ವನ್ನು ತುಂಬಿದರು.ಇದೇ ವೇಳೆ ಸಂತ್ರಸ್ತ ಯುವತಿಗೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ಧನ ಸಹಾಯವನ್ನು ಸಚಿವರು ಮಾಡಿದರು.ಇದೇ ವೇಳೆ ಈ ಒಂದು ಕೃತ್ಯವನ್ನು ಮಾಡಿ ಅಮಾನುಷ ಕೃತ್ಯವೆಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆಯನ್ನು ನೀಡಿದರು

ನಗರದ ಸೇಂಟ್ ಜಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿ ಮಾಡಿ ನಂತರ ಮಾತನಾಡಿದ ಅವರು ಆಸಿಡ್ ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಕುಟುಂಬಸ್ಥರು ಮಾನ ಸಿಕ ಧೈರ್ಯ ತಂದುಕೊಳ್ಳಬೇಕು.ಸರ್ಕಾರ ಸಂತ್ರಸ್ಥೆಯ ಜೊತೆ ಇರಲಿದೆ.ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು.ಸಂತ್ರಸ್ಥೆಯ ಜೊತೆ ಸರ್ಕಾರ ಆರೋಗ್ಯ ಇಲಾಖೆ ಇರಲಿದೆ.ಯುವತಿಯ ಪೋಷಕರ ನೋವು ಸರ್ಕಾರಕ್ಕೆ ಅರ್ಥವಾಗುತ್ತದೆ.ಘಟನೆಯ ವಿಷಯ ತಿಳಿದು ಅತೀವ ದು:ಖವಾಗಿದೆ.ಇದು ನಾಗರೀಕ ಸಮಾಜ ತಲೆತಗ್ಗಿಸುವ ಘಟನೆ.ಮಹಾ ಕ್ರೌರ್ಯವನ್ನು ಒಬ್ಬ ವ್ಯಕ್ತಿ ಹೇಗೆ ಮಾಡುತ್ತಾನೆ ಅನ್ನುವುದು ಅರಗಿಸಿಕೊಳ್ಳಲು ಸಾಧ್ಯ ವಿಲ್ಲ.ತಪ್ಪಿತಸ್ಥರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಿದೆ.ಫಾಸ್ಟ್ ಟ್ರ್ಯಾಕ್ ಕೋರ್ಟ್ ಮೂಲಕ ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ಆದಷ್ಟು ಶೀಘ್ರ ದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸುವ ಮೂಲಕ ಸಮಾಜ ಘಾತುಕರಿಗೆ ಎಚ್ಚರಿಕೆಯ ಸಂದೇಶ ನೀಡುವ ಅಗತ್ಯವಿದೆ ಎಂದರು.

ಇನ್ನೂ ಸೆಂಟ್ ಜಾನ್ ಆಸ್ಪತ್ರೆಯ ಜೊತೆ ಬೆಂಗಳೂರು ಮೆಡಿಕಲ್ ಕಾಲೇಜು ಕೂಡ ಯುವತಿಯ ಶಸ್ತ್ರ ಚಿಕಿತ್ಸೆಗೆ ನೆರವು ನೀಡಲಿದೆ.ಸಂತ್ರಸ್ತ ಯುವತಿಗೆ ಶೇ.35% ಸುಟ್ಟ ಗಾಯಗಳಾಗಿದ್ದು ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಒದಗಿಸ ಲಾಗುತ್ತಿದೆ.ಯುವತಿಗೆ ಅಗತ್ಯವಿರುವ ಚರ್ಮ ಕಸಿ ಸೇರಿ ದಂತೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸ ಲಿದ್ದು ನಾನು ವೈಯಕ್ತಿಕವಾಗಿ 5 ಲಕ್ಷ ರೂ.ಸಹಾಯಧನ ನೀಡಲು ನಿರ್ಧರಿಸಿದ್ದೇನೆ.ಯುವತಿಯ ಚಿಕಿತ್ಸೆ ಅಷ್ಟೇ ಅಲ್ಲದೆ ಆಕೆಯ ಮುಂದಿನ ಭವಿಷ್ಯಕ್ಕೆ ನೆರವಾಗಲು ಉದ್ಯೋಗ ಸೇರಿದಂತೆ ಎಲ್ಲ ರೀತಿಯ ಪುನರ್ವಸತಿ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ.ಈ ರೀತಿಯ ಅಮಾನವೀಯ ದುಷ್ಕೃತ್ಯಗಳು ಮರುಕಳಿಸದಂತೆ ವಿಕೃತ ಮನಸ್ಸುಗಳಿಗೆ ಕಡಿವಾಣ ಹಾಕಿ ಯುವತಿಯರಿಗೆ ಸುರಕ್ಷಿತ ಸಮಾಜ ನಿರ್ಮಿಸುವತ್ತ ಇಡೀ ಸಮಾಜ ಕಾರ್ಯೋ ನ್ಮುಖವಾಗಬೇಕಿದೆ ಎಂದು ಕರೆ ನೀಡಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...