LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನೆರೆ ಪರಿವಾರದಲ್ಲಿ ಅವ್ಯವಹಾರ - ನೌಕರರ ತಲೆದಂಡ - ಶಾಸಕ ಅಮೃತ ದೇಸಾಯಿ ದೂರಿನಿಂದ ಅಮಾನತು

ಧಾರವಾಡ - ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಮಾಡಿದ ಆರೋಪದ ಮೇಲೆ ಧಾರವಾಡದಲ್ಲಿ ನಾಲ್ಕು ಜನ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗಿದೆ.ಹೌದು ಧಾರವಾಡದಲ್ಲಿ ಈ ಒಂದು ಪ್ರಕರಣ ನಡೆದಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈ ಹಿಂದೆ ಬಿದ್ದ ಮನೆಗಳಿಗೆ ಪರಿಹಾರ ವಿತರಣೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೋಲ್ ಮಾಲ್ ನಡೆಯುತ್ತಿತ್ತು. ಶಾಸಕರಾದ ಅಮೃತ ದೇಸಾಯಿ ಅವರ ಕ್ಷೇತ್ರದಲ್ಲಿನ ನೆರೆ ಪರಿಹಾರದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಧನ ವಿತರಣೆ ಮಾಡುವಲ್ಲಿ ಸಾರ್ವಜನಿಕರಿಂದ ಅಧಿಕಾರಿಗಳು ಹಣವನ್ನು ತಗೆದುಕೊಳ್ಳುವ ಕುರಿತಂತೆ ದೂರುಗಳು ಕೇಳಿ ಬಂದಿದ್ದವು.ಸಾಕಷ್ಟು ಹಣ ತಗೆದುಕೊಂಡು ಪರಿಹಾರ ನೀಡುತ್ತಿದ್ದಾರೆಂದು ಸಾರ್ವಜನಿಕರ ಅಸಮಾಧಾನದಿಂದ. ಇದನ್ನು ಗಂಭೀರವಾಗಿ ತಗೆದುಕೊಂಡು ಶಾಸಕರಾದ ಅಮೃತ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದರು. ಅಲ್ಲದೇ ಶಿಸ್ತುಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದರು.

ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಪತ್ರವೊಂದನ್ನು ಬರೆದಿದ್ದರು. ಇದನ್ನು ಗಂಭೀರವಾಗಿ ತಗೆದುಕೊಂಡಿರುವ ಜಿಲ್ಲಾಧಿಕಾರಿಗಳು ಗರಗ ಕಂದಾಯ ನೀರಿಕ್ಷಕ ಎನ್ ಎಸ್ ಪಟ್ಟೇದ , ಮುಳಮುತ್ತಲ ಗ್ರಾಮ ಲೆಕ್ಕಾಧಿಕಾರಿ ರಾಕೇಶ ಪಾಟೀಲ್, PDO ವಾಲಿಕಾರ್ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಹಾಗೇ ಈ ಒಂದು ಕಮೀಟಿಯಲ್ಲಿದ್ದ ಇನ್ನೊರ್ವ ಬೇರೆ ಇಲಾಖೆಯ ಅಧಿಕಾರಿಯೊಬ್ಬರು ಮಾಡಿರುವ ತಪ್ಪಿನ ಕುರಿತಂತೆ ಜಿಲ್ಲಾಧಿಕಾರಿಗಳು ಆ ಇಲಾಖೆಗೆ ಪತ್ರವೊಂದನ್ನು ಬರೆದಿದ್ದಾರೆ.

ಶಾಸಕ ಅಮೃತ ದೇಸಾಯಿ

ಒಟ್ಟಾರೆ ಬಿದ್ದ ಮನೆಗಳಿಗೆ ಪರಿಹಾರ ನೀಡುವ ನೆಪದಲ್ಲಿ ಹಣ ತೆಗೆದುಕೊಂಡು ಸಾರ್ವಜನಿಕರ ಆಕ್ರೋಶಕ್ಕೇ ಗುರಿಯಾಗಿದ್ದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳ ತಲೆದಂಡವಾಗಿದ್ದು ಮುಂದೆ ತನಿಖೆಯ ನಂತರ ಏನೇಲ್ಲಾ ಕ್ರಮಗಳಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆ ಜನರ ನೋವಿಗೆ ಸ್ಪಂದಿಸಿದ ಶಾಸಕ ಅಮೃತ ದೇಸಾಯಿ ಯವರಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......