LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಶಾಸಕ ಶರತ್ ಬಚ್ಚೇಗೌಡ

ಬೆಂಗಳೂರು -

ಕಳೆದ ಹಲವು ದಿನಗಳಿಂದ ಹೊಸಕೋಟೆಯ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷದ ಸೇರ್ಪಡೆ ವಿಚಾರ ಕುರಿತು ಬಿಸಿ ಬಿಸಿಯಾದ ಚರ್ಚೆ ನಡೆಯುತ್ತಿತ್ತು ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದ್ದು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಇವರನ್ನು ಪಕ್ಷದ ನಾಯಕರು ಮುಖಂಡರು ಬರಮಾಡಿಕೊಂಡರು.ಇನ್ನುಹ ಶರತ್ ಬಚ್ಚೇಗೌಡ ಅವರು ಪಕ್ಷೇತರ ಶಾಸಕರಾಗಿರುವುದರಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ನಮ್ಮ ಪಕ್ಷಕ್ಕೆ ಸಹ ಸದಸ್ಯರಾಗಿ ಕೆಲಸ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ರಾಜಕೀಯ ಪಕ್ಷ ಸೇರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶರತ್ ತಂದೆ ಬಿ.ಎನ್.ಬಚ್ಚೇಗೌಡ ಅವರು ಭಾರತೀಯ ಜನತಾ ಪಕ್ಷದ ಸಂಸದರಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ, ಬಿಜೆಪಿ ಮುಖಂಡರಾಗಿದ್ದ ಶರತ್ 2019 ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಹಸಕೋಟೆ ಉಪಚುನಾವಣೆ ಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...