LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬೆಲ್ಲದ ಗೆ ಬುದ್ಧಿ ಹೇಳಿದ ಶಾಸಕ ಶಂಕರಪಾಟೀಲ -ನೀವು ಇನ್ನೂ ಸಣ್ಣವರು ಎಂದ ನವಲಗುಂದ ಶಾಸಕ....!

ಹುಬ್ಬಳ್ಳಿ -

ನಮ್ಮ ಸಮಾಜದ ಮುಖಂಡರಾದ ಶಾಸಕ ಯತ್ನಾಳ ಹಾಗೂ ಬೆಲ್ಲದ ಯಾವ ಅರ್ಥದಲ್ಲಿ ಮಾತನಾಡುತ್ತಿ ದ್ದಾರೆ ಗೊತ್ತಿಲ್ಲ.ಬೆಲ್ಲದ ಅವರು ಚಿಕ್ಕವರು ಇದ್ದಾರೆ. ಬೆಲ್ಲದ ಅವರು ಪಕ್ಷದ ತೀರ್ಮಾನದಂತೆ ನಡೆಯಲಿ ಎಂದು ನವಲಗುಂದ ಬಿಜೆಪಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಬೆಲ್ಲದ ಅವರಿಗೆ ಸಲಹೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿ ದ ಅವರು ಬೆಲ್ಲದ ಅವರು ದೂರದೃಷ್ಟಿ ಇಟ್ಟುಕೊಂ ಡು ರಾಜಕಾರಣ ಮಾಡಬೇಕು.ಅರವಿಂದ ಬೆಲ್ಲದ ಧಾರವಾಡ ಜಿಲ್ಲೆಯ ಶಾಸಕರಲ್ಲಿನ ಒಗ್ಗಟ್ಟು ಒಡೆಯ ಬಾರದು.ಬೆಲ್ಲದ ಅವರು ಸಿಎಂ ಆದರೆ ನಮಗೂ ತುಂಬಾ ಖುಷಿ ಇದೆ.ಆದರೆ ಅದಕ್ಕೆ ಇನ್ನೂ ತುಂಬಾ ಸಮಯ ಇದೆ.ಧಾರವಾಡ ಜಿಲ್ಲೆಯಲ್ಲಿ ಪಕ್ಷದ ಹಿರಿ ಯರಾದ ಪ್ರಹ್ಲಾದ ಜೋಶಿ, ಜಗದೀಶ್ ಶೆಟ್ಟರ್ ಇದ್ದಾರೆ‌.ಅವರ ಹೆಸರಿಗೆ ದಕ್ಕೆ ಬಾರದಂತೆ ಬೆಲ್ಲದ ಅವರು ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

https://youtu.be/ezMS9JGRNyU

ರಾಜ್ಯಕ್ಕೆ ಬಿಜೆಪಿ ಪಕ್ಷದ ವರಿಷ್ಠ ಅರುಣ್ ಸಿಂಗ್ ಆಗಮಿಸುವ ವಿಚಾರವಾಗಿ ಮಾತನಾಡಿದ ಅವರು ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ಸದ್ಯಕ್ಕೆ ನಮ್ಮ ಪಕ್ಷದ ಶಾಸಕರಿಗೆ ಸೂಚನೆ ಬಂದಿಲ್ಲ.ವರಿಷ್ಠರು ಶಾಸಕರ ಜೊತೆ ಪ್ರತ್ಯೇಕ ಚರ್ಚೆ ಅವಕಾಶ ನೀಡಿದ ರೇ ನಮ್ಮ ಅಭಿಪ್ರಾಯ ತಿಳಿಸುತ್ತೇವೆ ಎಂದರು.

ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ.ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆ ನಡೆದಿದೆ.‌ ಅವರೇ ನಮ್ಮ ನಾಯಕರು.ಬಿ.ಎಸ್.ವೈ ನಾಯಕತ್ವಕ್ಕೆ ನನ್ನ ಬೆಂಬಲ ಇದೆ.ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ಸದ್ಯಕ್ಕೆ ನಿಗಮ ಸ್ಥಾನ ನೀಡಿದ್ದಾರೆ.ಅದು ನನಗೆ ತೃಪ್ತಿ ಇದೆ ಎಂದು ಶಾಸಕ ಶಂಕರ ಪಾಟೀಲ ಮುನೇನ ಕೊಪ್ಪ ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...