LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕನ್ನಡ ಸಾಹಿತ್ಯ ಅಧ್ಯಕ್ಷರ ಆಯ್ಕೆಗಾಗಿ ಮುಹೂರ್ತ ಘೋಷಣೆ

ಬೆಂಗಳೂರು -

ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 09-05-2021 ರಂದು ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರು ಅವರಿಗೆ ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ ತಮ್ಮ ಮತವನ್ನು ಚಲಾಯಿಸಬಹುದಾಗಿದೆ.

ಈ ಕುರಿತಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳಾಗಿರುವಂತ ಜಿ.ಎಂ.ಗಂಗಾಧರಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ, ಜಿಲ್ಲಾ, ಗಡಿನಾಡು ಘಟಕ ಅಧ್ಯಕ್ಷರ ಚುನಾವಣೆಯನ್ನು ನಡೆಸಲು ನಿರ್ಧರಿಸಲಾಗಿದೆ. ದಿನಾಂಕ 09-05-2021ರಂದು ಚುನಾವಣೆ ನಡೆಸಲು ನಿಗದಿ ಪಡಿಸಲಾಗಿದೆ ಎಂದರು

ದಿನಾಂಕ 09-05-2021ಕ್ಕೆ ಮೂರು ವರ್ಷ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವವರು ಮಾತ್ರ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಹತ್ತು ವರ್ಷಗಳ ಹಿಂದಿನಿಂದ ಸತತವಾಗಿ ಹಾಗೂ ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಐದು ವರ್ಷಗಳ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕೆಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕರ, ಗಡಿನಾಡು ಘಟಕ ಅಧ್ಯಕ್ಷರ ಚುನಾವಣಾ ಅಭ್ಯರ್ಥಿಗಳ ನಾಮಪತ್ರಗಳನ್ನು ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಗೆ ದಿನಾಂಕ 29-03-2021 ಸೋಮವಾರದಿಂದ ದಿನಾಂಕ 07-04-2021ರ ಬುಧವಾರದವರೆಗೆ ಪ್ರತಿದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ( ರಜಾ ದಿನಗಳನ್ನು ಹೊರತುಪಡಿಸಿ) ಸ್ವೀಕರಿಸಲಾಗುವುದು.

ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಸಂಬಂಧ ನಾಮಪತ್ರಗಳನ್ನು ಆಯಾ ಜಿಲ್ಲಾ ಕೇಂದ್ರದ ತಾಲೂಕು ತಹಶೀಲ್ದಾರ ( ಜಿಲ್ಲಾ ಕ.ಸಾ.ಪ ಚುನಾವಣಾಧಿಕಾರಿಗಳು) ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದರು.

ನಾಮಪತ್ರದ ನಮೂನೆಗಳನ್ನು ಒಂದು ಪ್ರತಿಗೆ 10 ರೂ ನಂತೆ ಪಾವತಿಸಿ ಕಚೇರಿ ವೇಳೆಯಲ್ಲಿ ಪಡೆಯಬಹುದು.

ಈ ಎಲ್ಲಾ ನಾಮಪತ್ರಗಳನ್ನು ದಿನಾಂಕ 08-04-2021ರಂದು ಬೆಳಿಗ್ಗೆ 11 ಗಂಟೆಗೆ ಸಂಬಂಧಿಸಿದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ಮಾಡಲಾಗುವುದು. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ದಿನಾಂಕ 12-04-2021ರ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ ದಿನಾಂಕ 12-04-2021ರಂದೇ ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು ಎಂದರು

ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರು ಅವರಿಗೆ ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ ದಿನಾಂಕ 09-05-2021ರಂದು ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಮತವನ್ನು ಚಲಾಯಿಸುವುದು.

ದಿನಾಂಕ 11-05-2021ರಂದು ಗಡಿನಾಡು ಘಟಕಗಳ ಅಧ್ಯಕ್ಷರ ಫಲಿತಾಂಶಗಳನ್ನು ಘೋಷಣೆ ಮಾಡಲಾಗುತ್ತದೆ. ದಿನಾಂಕ 12-05-2021ರಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ಘೋಷಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ ಒಟ್ಟಾರೆ ಸಾಹಿತ್ಯ ಸಮ್ಮೇಳನ ಮುಂದೂಡಿದ ಈಗ ಪರಿಷತ್ತಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು ಇದು ಸರಿನಾ ಎಂಬ ಪ್ರಶ್ನೆ ಕಾಡುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...