LIVE TV LocalCrimeNationalInternationalPoliticsEducationTechnologyEntertainmentSportsFeature
National News

ಪಂಚ ರಾಜ್ಯಗಳಿಗೆ ಮುಹೂರ್ತ ಘೋಷಣೆ

ನವದೆಹಲಿ -

ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ‌ ಇಡೀ ದೇಶದ ಕೇಂದ್ರ ಬಿಂದುವಾಗಿರುವ ತಮಿಳುನಾಡು, ಕೇರಳ, ಪಶ್ಚಿಮಬಂಗಾಲ, ಅಸ್ಸಾಂ ವಿಧಾನಸಭಾ ಚುನಾವಣೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ‌.

ವಿಜ್ಞಾನ್ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ, ಅಸ್ಸಾಂನಲ್ಲಿ 3 ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27 ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1 ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ 2ಕ್ಕೆ ಮತಎಣಿಕೆ ನಡೆಯಲಿದೆ ಎಂದರು.

ಕೇರಳ:

ಕೇರಳ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6ರಂದು ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ತಮಿಳುನಾಡು:

ತಮಿಳುನಾಡು ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 6ರಂದು ಚುನಾವಣೆ, ಮೇ 2ರಂದು ಮತಎಣಿಕೆ ನಡೆಯಲಿದೆ.

ಪುದುಚೇರಿ:

ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6 ರಂದು ಪುದುಚೇರಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಶ್ಚಿಮಬಂಗಾಳ 8 ಹಂತಗಳಲ್ಲಿ ಮತದಾನ

ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ, ಏಪ್ರಿಲ್ 6ರಂದು 3ನೇ ಹಂತದ ಚುನಾವಣೆ, ಏಪ್ರಿಲ್ 10ರಂದು 4ನೇ ಹಂತದ ಚುನಾವಣೆ, ಏಪ್ರಿಲ್ 17ರಂದು 5ನೇ ಹಂತದ ಮತದಾನ, ಏಪ್ರಿಲ್ 22ರಂದು 6ನೇ ಹಂತದ ಮತದಾನ, ಏಪ್ರಿಲ್ 26ರಂದು 7ನೇ ಹಂತದ ಮತದಾನ, ಏಪ್ರಿಲ್ 29ರಂದು 8ನೇ ಹಂತದ ಮತದಾನ, ಮೇ 2ರಂದು ಫಲಿತಾಂಶ ಪ್ರಕಟ.

ಕೋವಿಡ್ 19 ಸೋಂಕು ನಂತರ ಬಿಹಾರ ಚುನಾವಣೆ ನಡೆದಿದ್ದು, ಆ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದ್ದು, ಈ ಚುನಾವಣೆ ಕೂಡಾ ಕೋವಿಡ್ ಮಾರ್ಗದರ್ಶಿಯಂತೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆಯೋಗ ಹೇಳಿದೆ.

ಪಶ್ಚಿಮಬಂಗಾಳದ 294 ಕ್ಷೇತ್ರಕ್ಕೆ, ತಮಿಳುನಾಡಿನ 234 ಸ್ಥಾನಕ್ಕೆ, ಕೇರಳದ 140 ಕ್ಷೇತ್ರಕ್ಕೆ, ಅಸ್ಸಾಂನ 126 ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ 30 ಸ್ಥಾನಗಳಿಗೆ ಚುನಾವಣೆ ನಡೆಸಲು ಮುಹೂರ್ತ ನಿಗದಿಯಾದಂತಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...