ಧಾರವಾಡ -
ಗರಗ ಸರ್ಕಲ್‌ಗೆ ಹೊಸ ಸಾರಥಿ ಮಹಮ್ಮದ್ ರಫೀಕ್ ಅಧಿಕಾರ ಸ್ವೀಕಾರ ಹೌದು ಗರಗ ಪೊಲೀಸ್ ವೃತ್ತಕ್ಕೆ ನೂತನ ವೃತ್ತ ನಿರೀಕ್ಷಕರಾಗಿ ಮಹಮ್ಮದ್ ರಫೀಕ್ ತಹಶಿಲ್ದಾರ ಅವರು ಅಧಿಕಾರ ವಹಿಸಿಕೊಂ ಡಿದ್ದಾರೆ. ಈ ಮೂಲಕ ಗರಗ ವೃತ್ತದ ಪೊಲೀಸ್ ಆಡಳಿತಕ್ಕೆ ಹೊಸ ನಾಯಕತ್ವ ದೊರೆತಂತಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಮಹಮ್ಮದ್ ರಫೀಕ್ ಅವರು ಗರಗ ವೃತ್ತ ವ್ಯಾಪ್ತಿ ಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರೊಂ ದಿಗೆ ಉತ್ತಮ ಸಂಪರ್ಕ ಹೊಂದುವುದು ತಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದು ತಿಳಿಸಿದ್ದಾರೆ.
ವೃತ್ತ ವ್ಯಾಪ್ತಿಯಲ್ಲಿನ ಪ್ರಮುಖ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಸಮನ್ವಯ ದಿಂದ ಕಾರ್ಯನಿರ್ವಹಿಸುವುದಾಗಿ ಅವರು ಹೇಳಿ ದ್ದಾರೆ. ಸಾರ್ವಜನಿಕರು ಯಾವುದೇ ಸಮಸ್ಯೆ ಎದುರಾದಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಮನವಿ ಮಾಡಲಾಗಿದೆ.
ಗರಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಂತಿ, ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನೂತನ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ವ್ಯಕ್ತವಾಗಿದೆಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ.....