LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಹಿಳಾ ಕಾಂಗ್ರೆಸ್ ನ ಹೊಸ ಕಾರ್ಯಕ್ರಮ – ಮಹಿಳಾ ಕಾಂಗ್ರೇಸ್ ನಡಿಗೆ ಅನ್ನದಾತರ ಬಳಿಗೆ

ಧಾರವಾಡ -

ದೇಶದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ರೈತರ ಹಿತವನ್ನು ಮರೆತು, ರೈತರಿಗೆ ವಿರುದ್ಧವಾದ, ರೈತ ಮರಣ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದನ್ನು ಉಗ್ರವಾಗಿ ಪ್ರತಿಭಟಿಸುತ್ತಾ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ ಉಪಸ್ಥಿತಿಯಲ್ಲಿ ಮಹಿಳಾ ಕಾಂಗ್ರೇಸ್ ನಡಿಗೆ ಅನ್ನದಾತ ಬಳಿಗೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಶ್ರೀಮತಿ ದೀಪಾ ನಾಗರಾಜ ಗೌರಿ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆಯ ಮೂಲಕ ಈ ಒಂದು ಮಾಹಿತಿಯನ್ನು ನೀಡಿದ್ದಾರೆ. ಡಿಸೆಂಬರ್ 23 ರಂದು ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ್ ಗೌರಿ ಯವರ ನೇತೃತ್ವದಲ್ಲಿ ವಿಭಿನ್ನವಾದಂತಹ ಹಾಗೇ ವಿನೂತನವಾದಂತಹ ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ವಿರುದ್ಧ ಡಿಸೆಂಬರ್ 23 ರಂದು ಹುಬ್ಬಳ್ಳಿಯಲ್ಲಿ ನಾಳೆ ವಿಶ್ವ ರೈತರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನೂ ನಮ್ಮ ಬೆಂಬಲ ಅನ್ನದಾತರ ಹೋರಾಟಕ್ಕೆ ಎನ್ನುವ ಘೋಷಣೆಯೊಂದಿಗೆ " ಮಹಿಳಾ ಕಾಂಗ್ರೆಸ್ ನ ನಡಿಗೆ ಅನ್ನದಾತರ ಬಳಿಗೆ" ಎನ್ನುವಂತಹ ಶೀರ್ಷಿಕೆ ಅಡಿಯಲ್ಲಿ ವಿನೂತನವಾದಂತಹ ಕಾರ್ಯಕ್ರಮವನ್ನು ನಾಳೆ 23.12.2020 12.00 ಮಧ್ಯಾಹ್ನ ನವಲೂರ ನ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಇನ್ನೂ ಈ ಪ್ರತಿಭಟನೆಗೆ ಕಾಂಗ್ರೆಸ್ ನ ಮುಖಂಡರು ಎಲ್ಲ ಘಟಕದ ಅಧ್ಯಕ್ಷರು,ಮಹಿಳಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಮಿಟಿಯ ಎಲ್ಲ ಪದಾಧಿಕಾರಿಗಳು, ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......