ಬೆಂಗಳೂರು -
ರಾಜ್ಯದ ಸರ್ಕಾರಿ ವೈದ್ಯರು ತಮ್ಮ ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ವಾಸವಿರುವುದನ್ನು ಖಚಿತಪಡಿಸಿ ಕೊಳ್ಳಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು ನವೆಂಬರ್ 1, 2026ರಿಂದ ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಪ್ರತಿದಿನ ರಾತ್ರಿ 9 ಗಂಟೆಯ ಬಳಿಕ 'ಕರ್ತವ್ಯ ಆಯಪ್' ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಪ್ರಾಯೋ ಗಿಕವಾಗಿ ಜಾರಿಗೆ ತರಲು ಸರ್ಕಾರ ಆದೇಶಿಸಿದೆ.
ಸರ್ಕಾರದ ಪ್ರಜಾ ಸೇವಾ ಇಲಾಖೆಯು 2026ರ ಅಕ್ಟೋಬರ್ 17ರಂದು ಈ ಕುರಿತು ಆದೇಶ ಹೊರಡಿ ಸಿದ್ದು ವೈದ್ಯರ ರಾತ್ರಿ ಹಾಜರಾತಿಯನ್ನು ಅವರ ಕರ್ತವ್ಯದ ಕೇಂದ್ರ ಸ್ಥಾನದ ಭೌಗೋಳಿಕ ವ್ಯಾಪ್ತಿ ಯೊಳಗೆ ದಾಖಲಿಸುವುದು ಕಡ್ಡಾಯವಾಗಲಿದೆ.
ಸರ್ಕಾರದ ಆದೇಶದ ಪ್ರಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ತಾಲ್ಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ವೈದ್ಯರು ನವೆಂಬರ್ 1ರಿಂದ ಪ್ರತಿದಿನ ರಾತ್ರಿ 9 ಗಂಟೆಯ ಬಳಿಕ ಕರ್ತವ್ಯ ಆಯಪ್‌ನಲ್ಲಿ ಹಾಜರಾತಿ ದಾಖಲಿಸಬೇಕು.
ವೈದ್ಯರು ತಮ್ಮ ಕೇಂದ್ರ ಸ್ಥಾನವಿರುವ ನಗರ, ಪಟ್ಟಣ ಅಥವಾ ಗ್ರಾಮದ ಭೌಗೋಳಿಕ ಮಿತಿಯೊಳಗಿಂದಲೇ ಹಾಜರಾತಿ ದಾಖಲಿಸಬೇಕಾಗುತ್ತದೆ.ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ನಿಯಮಾನುಸಾರ ನಿಗದಿಪಡಿಸಿದ ಕೇಂದ್ರ ಸ್ಥಾನದಲ್ಲಿ ವಾಸವಿರದೆ ದೂರದ ಪ್ರದೇಶಗಳಲ್ಲಿ ನೆಲೆಸಿರುವುದರಿಂದ ಕರ್ತವ್ಯ ಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗದಿರುವುದು ಹಾಗೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿರದಿರುವ ಕುರಿತು ದೂರುಗಳು ಬಂದಿವೆ.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರು ವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸ್ಥಾನ ದಲ್ಲಿಯೇ ವಾಸಿಸುವುದನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ ಈ ಸಂಬಂಧ ಉಪಲೋಕಾ ಯುಕ್ತರು ನೀಡಿದ ಸಲಹೆ ಹಾಗೂ ಸಂಬಂಧಿತ ಸರ್ಕಾರಿ ನಿಯಮಗಳನ್ನು ಪರಿಗಣಿಸಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.
ವೈದ್ಯರು ದಾಖಲಿಸುವ ರಾತ್ರಿ ಹಾಜರಾತಿ ವರದಿ ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರತಿ ತಿಂಗಳು ಪರಿಶೀಲಿಸಬೇಕು. ಅನುಮತಿಯಿಲ್ಲದೆ ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದಿರುವುದು ಕಂಡು ಬಂದರೆಸಂಬಂಧಿತ ನಿಯಮಗಳು ಮತ್ತು ಸರ್ಕಾರಿ ಸುತ್ತೋಲೆಯನ್ವಯ ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದ್ದು ಇದರ ನಂತರ ಮುಂದೆ ಉಳಿದ ಇಲಾಖೆ ಗಳಿಗೆ ವಿಸ್ತರಣೆ ಮಾಡುವ ಯೋಚನೆ ರಾಜ್ಯ ಸರ್ಕಾರ ಇಟ್ಟುಕೊಂಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....