LIVE TV LocalCrimeNationalInternationalPoliticsEducationTechnologyEntertainmentSportsFeature
State News

NPS ಬೇಡ OPS ಬೇಕು - ಶಿಕ್ಷಕರ, ನೌಕರರ ಬೃಹತ್ ಪ್ರತಿಭಟನೆ.....ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ.....

ಧಾರವಾಡ -

 

ಎನ್‌ಪಿಎಸ್ ಬೇಡ, ಒಪಿಎಸ್ ಬೇಕು ಹೀಗೆ ಬೇಡಿಕೆ ಇಟ್ಟುಕೊಂಡು ಧಾರವಾಡದಲ್ಲಿ ಶಿಕ್ಷಕರು–ನೌಕರರ ಬೃಹತ್ ಘರ್ಜನೆ ಮಾಡಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಿದರು ಹೌದು ನಿವೃತ್ತಿಯ ಬದುಕು ಅನಿಶ್ಚಿತತೆಯಲ್ಲಿ ಸಾಗಬಾರದು ಸರ್ಕಾರಿ ನೌಕರರ ಸೇವೆಗೆ ಗೌರವ ಸಿಗಬೇಕಾದರೆ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿಯಾಗ ಲೇಬೇಕು ಈ ಘೋಷಣೆಯೊಂದಿಗೆ ಧಾರವಾಡ ನಗರ ಶಿಕ್ಷಕರು ಹಾಗೂ ಮಾಧ್ಯಮಿಕ ಶಾಲಾ ನೌಕರರ ಹೋರಾಟದ ಕಣವಾಗಿ ಮಾರ್ಪಟ್ಟಿತು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ), ಬೆಂಗಳೂರು, ಧಾರವಾಡ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ), ಹುಬ್ಬಳ್ಳಿ, ಧಾರವಾಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಬೃಹತ್ ಪ್ರತಿಭಟನೆ ಸರ್ಕಾರದ ಗಮನ ಸೆಳೆಯುವಂತಿತ್ತು.

ನಗರದ ಆರ್.ಎಲ್.ಎಸ್. ಶಾಲಾ ಮೈದಾನದಿಂದ ಆರಂಭ ವಾದ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಶಿಕ್ಷಕರು ಮತ್ತು ನೌಕರರು ಭಾಗವಹಿ ಸಿದರು. "ಎನ್‌ಪಿಎಸ್ ರದ್ದು ಮಾಡಿ, ಒಪಿಎಸ್ ಜಾರಿಗೊಳಿಸಿ" ಎಂಬ ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಬಳಿಕ ಜಿಲ್ಲಾಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸ ಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ನಾರಾಯಣ ಭಜಂತ್ರಿ, ಜಿಲ್ಲಾ ಅಧ್ಯಕ್ಷ ಪ್ರಮೋದ್ ಹರಿಬಟ್ಟ, ಬಿ.ಜಿ. ಬಶೆಟ್ಟಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಧರ ಗಸ್ತಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಉಪಾಧ್ಯಕ್ಷ ಎನ್.ಎಸ್. ಗೋವಿಂದರೆಡ್ಡಿ, ಜಿಲ್ಲಾಧ್ಯಕ್ಷ ವಿ.ಎಸ್. ಹುದ್ದಾರ, ಕಾರ್ಯದರ್ಶಿ ಎನ್.ಎನ್. ಸವಣೂರ,

ಸಂಯುಕ್ತ ಕಾರ್ಯದರ್ಶಿ ಆರ್.ಬಿ. ಕೊಣ್ಣೂರ, ಮಾಧ್ಯಮಿಕ ಶಿಕ್ಷಕರ ಸಂಘದ ಮುಖಂಡ ಸಂದೀಪ ಬೂದಿಹಾಳ ಹಾಗೂ ಪದವಿಪೂರ್ವ ಉಪನ್ಯಾಸಕರ ಸಂಘದ ಮುಖಂಡ ಶೇಖರ ಗೋಳ, ಪೀರೋಜ ಗುಡೆನಕಟ್ಟಿ , ಎಸ್ ಆರ್ ರಾಚಣ್ಣವರ, ಈಶ್ವರ ಕೊಡ್ಲಿ, ರಮೇಶ ತಳವಾರ, ಶರಣು ಅಂಗಡಿ, ಮಂಜುನಾಥ ಕುರಕುರಿ, ಬಸವರಾಜ ವಾಸನದ, ವಹಿಸಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯಕರು, "ರಾಷ್ಟ್ರೀಯ ಪಿಂಚಣಿ ಯೋಜನೆಯು ನಿವೃತ್ತ ನೌಕರರಿಗೆ ಖಚಿತ ಆದಾಯ ಅಥವಾ ಸಾಮಾಜಿಕ ಭದ್ರತೆಯನ್ನು ಒದಗಿಸುವುದಿಲ್ಲ. ಸರ್ಕಾರಿ ಸೇವೆಯಲ್ಲಿ ಜೀವಮಾನವಿಡೀ ದುಡಿದ ನೌಕರರು ನಿವೃತ್ತಿಯ ನಂತರ ಗೌರವಯುತ ಬದುಕು ನಡೆಸಲು ಹಳೆಯ ಪಿಂಚಣಿ ಯೋಜನೆಯೇ ಸೂಕ್ತ ಮಾರ್ಗವಾಗಿದೆ ಎಂದು ಅಭಿಪ್ರಾಯ ಪಟ್ಟರು.

 

ಮುಖಂಡರು ಮಾತನಾಡಿ "ಎನ್‌ಪಿಎಸ್ ಮಾರುಕಟ್ಟೆ ಆಧಾರಿತ ಯೋಜನೆಯಾಗಿದ್ದು, ನಿವೃತ್ತಿಯ ನಂತರ ನೌಕರರ ಬದುಕಿಗೆ ಖಚಿತ ಭದ್ರತೆ ನೀಡುವುದಿಲ್ಲ. ಹಲವು ರಾಜ್ಯಗಳು ಈಗಾಗಲೇ ಒಪಿಎಸ್ ಅನ್ನು ಮರುಜಾರಿಗೊಳಿಸಿವೆ. ಕರ್ನಾಟಕ ಸರ್ಕಾರವೂ ನೌಕರರ ನ್ಯಾಯಸಮ್ಮತ ಬೇಡಿಕೆಗೆ ಸ್ಪಂದಿಸಿ ಹಳೆಯ ಪಿಂಚಣಿ ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು," ಎಂದು ಆಗ್ರಹಿಸಿದರು.

ಕರ್ನಾಟಕ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿ, ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಅನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಮುಖಂಡರು ನೀಡಿದರು.

ಪ್ರತಿಭಟನೆಯಲ್ಲಿ ಶಿಕ್ಷಕರು, ಶಾಲಾ ನೌಕರರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿ ಸಿದ್ದರು. ಶಾಂತಿಯುತವಾಗಿ ನಡೆದ ಈ ಪ್ರತಿಭಟನೆ ಸರ್ಕಾರದತ್ತ ನೌಕರರ ಏಕಮತದ ಧ್ವನಿಯನ್ನು ತಲುಪಿಸುವ ಪ್ರಯತ್ನವಾಗಿ ಗಮನ ಸೆಳೆಯಿತು.

ಸರ್ಕಾರದ ಮುಂದಿನ ನಿರ್ಧಾರವೇ ಲಕ್ಷಾಂತರ ಸರ್ಕಾರಿ ನೌಕರರ ನಿವೃತ್ತಿ ಬದುಕಿನ ಭವಿಷ್ಯವನ್ನು ನಿರ್ಧರಿಸಲಿದೆ ಎಂಬ ಸಂದೇಶದೊಂದಿಗೆ ಧಾರವಾಡದ ಈ ಹೋರಾಟ ಅಂತ್ಯ ಗೊಂಡಿತು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....