ಶ್ರವಣಬೆಳಗೊಳ -
ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ-ಸಾಕ್ಸ್ ಪೂರೈಸಿ ಶಾಸಕ ಸಿ.ಎನ್.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಹೌದು ಶಾಲಾ ಮಕ್ಕಳಿಗೆ ಸರ್ಕಾರದಿಂದ ವಿತರಣೆಯಾಗುತ್ತಿರುವ ಶೂ ಮತ್ತು ಸಾಕ್ಸ್ ನ ಗುಣಮಟ್ಟ ಹಾಗೂ ಅಳತೆಗೆ ಸಂಬಂಧಿಸಿದಂತೆ ಸಮಸ್ಯೆಗಳು ಕಂಡುಬರುತ್ತಿವೆ ಈ ಹಿನ್ನೆಲೆಯಲ್ಲಿ ಹಿಂದೆ ಜಾರಿಯಲ್ಲಿದ್ದ ವ್ಯವಸ್ಥೆಯನ್ನೇ ಮುಂದುವರಿಸುವುದು ಸೂಕ್ತ' ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಜಯದುರ್ಗಾ ಸೇವಾ ಚಾರಿಟಬಲ್ ಟ್ರಸ್ಟ್ ಹಾಗೂ ಆಂಥೆಮ್ ಬಯೋಸೈನ್ಸಸ್ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಶಾಲಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದ ಅವರು, ಇತ್ತೀಚೆಗೆ ಶಾಟ್‌ಪಟ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಲತೇಶ್ ಗೌಡನನ್ನು ಅಭಿನಂದಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಚ್.ಸತೀಶ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೆ.ಎನ್.ಅನಿಲ್, ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಬಿ.ಕೆ.ಸತೀಶ್, ರವಿಕುಮಾರ್, ದೇವೇಂದ್ರಕುಕುಮಾರ್, ಎಸ್.ವಿ.ಪುಟ್ಟರಾಜು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರವಿಕುಮಾರ್, ಟ್ರಸ್ಟ್‌ನ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.
ಸುದ್ದಿ ಸಂತೆ ನ್ಯೂಸ್ ಶ್ರವಣಬೆಳಗೊಳ.....