ಹಾವೇರಿ -
ಗ್ರಾಮ ಲೆಕ್ಕಾಧಿಕಾರಿ ಪರೀಕ್ಷಾ ಅಕ್ರಮ ಪ್ರಕರಣ ಮೊಬೈಲ್ ಸೀಜ್ ನಾಲ್ವರಿಗೆ ಶೋಕಾಸ್ ನೋಟಿಸ್ ಹೌದು ಕಾನ್ಸಟೇಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಗಳನ್ನು ಪಡೆದಿದ್ದ ಹಾನಗಲ್ ಪಟ್ಟಣದ ಶಂಕರ್ ಬನ್ನೂರ ಗ್ರಾಮ ಲೆಕ್ಕಾಧಿಕಾರಿ ಪರೀಕ್ಷೆಯಲ್ಲಿ ಹೈಟೆಕ್ ಅಕ್ರಮ ಎಸಗಿ ಬರೋಬ್ಬರಿ 151 ಅಂಕಗ ಳನ್ನು ಪಡೆದು ಪ್ರಥಮ ರ‍್ಯಾಂಕ್ ಗಳಿಸಿರುವ ಬಹು ಚರ್ಚಿತ ಪ್ರಕರಣದ ತನಿಖೆ ತೀವ್ರಗೊಂಡಿದೆ.
ಹಾವೇರಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾ ಧಿಕಾರಿ ಲಕ್ಷ್ಮಣ ಶಿರಕೋಳ್ ನೇತೃತ್ವದಲ್ಲಿ ಈ ಕುರಿತು ಕೂಲಂಕಷ ತನಿಖೆ ಮುಂದುವರಿದಿದೆ.ಪ್ರಕರಣದ ಕುರಿತು ಮಾಹಿತಿ ನೀಡಿರುವ ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ, 'ಆರೋಪಿ ಶಂಕರ್‌ನಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದ್ದು, ಸೈಬರ್ ಪೊಲೀಸರಿಗೆ ತನಿಖೆಗೆ ನೀಡಲಾಗಿದೆ. ಪರೀಕ್ಷೆಗೆ ಇದೇ ಮೊಬೈಲ್ ಅನ್ನು ಬಳಸಲಾಗಿದೆ ಎಂದು ಆರೋಪಿ ತಿಳಿಸಿದ್ದಾನೆ.
ಸದ್ಯ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ತಾಂತ್ರಿಕ ಅಂಶಗಳು ಮತ್ತು ಸಾಕ್ಷಿಗಳ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ. ಸದ್ಯದಲ್ಲೇ ಸಂಪೂರ್ಣ ಸತ್ಯ ಹೊರಬರಲಿದೆ' ಎಂದಿದ್ದಾರೆ.ಅಲ್ಲದೆ, ಈ ಅಕ್ರಮದಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆಯೂ ಗಂಭೀರ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಡಿವೈಎಸ್ಪಿ ಗುರುಶಾಂತಪ್ಪ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಸ್ಪಷ್ಟಪ ಡಿಸಿದ್ದಾರೆ
ಮತ್ತೊಂದೆಡೆ, ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿ ಗಳು ಹಾಗೂ ಸಿಬ್ಬಂದಿಯ ಕರ್ತವ್ಯಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಅವರು ನಾಲ್ವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.ಕಳೆದ ಅಕ್ಟೋಬರ್ 4ರಂದು ಶಿಗ್ಗಾಂವಿಯ ಮಾಮಲೇ ದೇಸಾಯಿ ಪದವಿಪೂರ್ವ ಕಾಲೇಜಿನಲ್ಲಿ ವಿಎಒ ಪರೀಕ್ಷೆ ನಡೆದಿತ್ತು. ಈ ಪರೀಕ್ಷಾ ಕೇಂದ್ರದ ಪ್ರಾಂಶುಪಾಲರು, ಕೊಠಡಿ ಮೇಲ್ವಿಚಾರಕರು, ಚೆಕ್ಕಿಂಗ್ ಸಿಬ್ಬಂದಿ ಹಾಗೂ ಡ್ರೆಸ್ ಕೋಡ್ ಅಧಿಕಾರಿ ಈ ನಾಲ್ವರಿಗೆ ನೋಟಿಸ್ ನೀಡಲಾಗಿದೆ.
ಪರೀಕ್ಷೆಯಲ್ಲಿ ಇವರು ಶಾಮೀಲಾಗಿದ್ದಾರಾ ಅಥವಾ ಇಲ್ಲವಾ ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಿಗ್ಗಾಂವ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ತನಿಖಾ ವರದಿಗಳು ಹೊರಬಂದ ಬಳಿಕ ಈ ಅಕ್ರಮದ ಹಿಂದೆ ಯಾರ ಯಾರ ಕೈವಾಡವಿದೆ ಎಂಬುದು ಅಧಿಕೃತವಾಗಿ ಬಹಿರಂಗಗೊಳ್ಳಲಿದೆ.
ಸುದ್ದಿ ಸಂತೆ ನ್ಯೂಸ್ ಹಾವೇರಿ .....