LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ನೊಟೀಸ್ ವಿದ್ಯಾರ್ಥಿ ನಿಯ ಮೇಲೆ ಹಲ್ಲೆ ಮಾಡಿದ ಆರೋಪ ಸೂಕ್ತ ಕ್ರಮಕ್ಕೆ ಸೂಚನೆ

ಕಲಬುರ್ಗಿ -

ಕಲಬುರ್ಗಿಯ ಕಾಳಗಿ ತಾಲ್ಲೂಕಿನ ರೇವಗ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯ ಸರಿಯಾಗಿ ಮಾಡಿಲ್ಲ ಎಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಪ್ರಾಚಾರ್ಯ ಮರೆಪ್ಪ ಸುರಪುರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರಗೆ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.ಹಲ್ಲೆ ನಡೆಸಿದ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನಲೆ ಯಲ್ಲಿ ಸ್ಥಳಕ್ಕೆ ದೌಡಾಯಿಸಿದ ರಮೇಶ ಸಂಗಾ ಅವರು ಶಾಲೆಯ ಪ್ರಾಚಾರ್ಯರು ಹಾಗೂ ವಿದ್ಯಾರ್ಥಿನಿಗೆ ಥಳಿಸಿ ರುವ ಆರೋಪ ಎದುರಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಮಲ್ಕಪ್ಪ ಬಿರಾದಾರ ಅವರನ್ನು ವಿಚಾರಣೆಗೊಳಪಡಿ ಸಿದರು‌

ಅಲ್ಲದೇ, ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ಥಳಿತಕ್ಕೊಳಗಾದ ವಿದ್ಯಾರ್ಥಿನಿಯನ್ನು ಪೋಷಕರು ತಮ್ಮ ಊರಿಗೆ ಕರೆದುಕೊಂಡು ಹೋಗಿದ್ದರು.ಅವರ ಪೋಷಕ ರಿಗೆ ಕರೆ ಮಾಡಿ ಮಾಹಿತಿ ಪಡೆದರು.ಮುಂದೆ ಹೀಗಾಗದಂತೆ ಎಚ್ಚರ ವಹಿಸಲಾಗುವುದು. ಹೀಗಾಗಿ, ಶಾಲೆಗೆ ಮಗಳನ್ನು ತಂದು ಬಿಡುವಂತೆ ಮನವೊಲಿಸಿದರು.ಶಾಲೆಯಲ್ಲಿರುವ ವಿದ್ಯಾರ್ಥಿನಿಯರು ಮಲ್ಕಪ್ಪ ಅವರು ಹಲ್ಲೆ ನಡೆಸಿದ ಬಗ್ಗೆ ಮಾಹಿತಿ ನೀಡಿದರು.ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಂಗಾ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದರು.ಎರಡು ದಿನಗಳ ಒಳಗಾಗಿ ಸಮಜಾಯಿಷಿ ನೀಡುವಂತೆ ತಿಳಿಸಿದ್ದಾ ರೆ ಇನ್ನೂ ಪ್ರಮುಖವಾಗಿ ವಿದ್ಯಾರ್ಥಿನಿಗೆ ಮಲ್ಲಪ್ಪ ಬಿರಾದಾರ ಥಳಿಸಿರುವುದು ದೃಢಪಟ್ಟಿದೆ.ಹೀಗಾಗಿ, ಅವರನ್ನು ಶಾಲೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲು ಕೇಂದ್ರ ಕಚೇರಿಗೆ ಶಿಫಾರಸು ಮಾಡಲಾಗುವುದು ಎಂದು ಕ್ರೈಸ್ ಜಿಲ್ಲಾ ಸಂಯೋಜಕ ಶಿವರಾಮ ಚವ್ಹಾಣ ತಿಳಿಸಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....