ಮಂಗಳೂರು -
ದಸರಾ ರಜೆ ಮುಗಿದು ಅಕ್ಟೋಬರ್ 22 ರಂದು ಶಾಲೆ ಗಳು ಆರಂಭದ ಬೆನ್ನಲ್ಲೇ ಅಕ್ಟೋಬರ್ 22 ರಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ
ನವರಾತ್ರಿ ಉತ್ಸವದ ಕೊನೆಯ ದಿನದಂದು (ಅ.21) ತಡರಾತ್ರಿಯವರೆಗೆ ಕಾರ್ಯಕ್ರಮವಿರುವ ಕಾರಣ ವಿದ್ಯಾರ್ಥಿಗಳಿಗೆ ಮರುದಿನ (ಅ.22) ಶಾಲೆಗಳಿಗೆ ತೆರಳಲು ಸಮಸ್ಯೆಯಾಗಲಿದೆ.ಹಾಗಾಗಿ ಈ ಬಗ್ಗೆ ಪರಿಶೀಲಿಸಬೇಕು ಎಂದು ಸಾರ್ವಜನಿಕರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ರ ಗಮನ ಸೆಳೆದಿದ್ದರು.
ಆ ಹಿನ್ನೆಲೆಯಲ್ಲಿ ಈ ಬಗ್ಗೆ ಕ್ರಮ ಜರಗಿಸುವಂತೆ ಸಚಿವ ಖಾದರ್ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಅದರಂತೆ ಅ.22ರ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಮತ್ತು ಸರಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು ಉಪ ನಿರ್ದೇಶಕರು ರಜೆ ಆದೇಶ ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಗಳೂರು.....