LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಭಾಗ್ಯ.....NPS ನಿಂದ OPS ಸೇರ್ಪಡೆ.....

ಬೆಂಗಳೂರು -

ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಭಾಗ್ಯ NPSನಿಂದ OPSಗೆ ಸೇರ್ಪಡೆ ಹೌದು ರಾಜ್ಯದ ಸಾವಿರಾರು ಶಿಕ್ಷಕ ರಿಗೆ ಮಹತ್ವದ ಸಿಹಿಸುದ್ದಿ ಸಿಕ್ಕಿದ್ದು, 3,773 ಶಿಕ್ಷಕರು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಬದಲಿಗೆ ಹಳೆ ಪಿಂಚಣಿ ಯೋಜನೆ (OPS) ವ್ಯಾಪ್ತಿಗೆ ಸೇರ್ಪಡೆಯಾಗ ಲಿದ್ದಾರೆ.2006ರ ಏಪ್ರಿಲ್‌ 1ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದ ಹುದ್ದೆಗಳಿಗೆ ನೇಮಕಗೊಂಡಿರುವ ಶಿಕ್ಷಕರಿಗೆ ಈ ಸೌಲಭ್ಯ ದೊರೆ ಯಲಿದೆ

ದೀರ್ಘಕಾಲದಿಂದ NPS ಬದಲಿಗೆ OPS ಜಾರಿಗೆ ಸಂಬಂಧಿಸಿದಂತೆ ಬೇಡಿಕೆಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ, ಅರ್ಹ ಶಿಕ್ಷಕರನ್ನು ಗುರುತಿಸಿ ಹಳೆ ಪಿಂಚಣಿ ಯೋಜನೆಯ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ನಿರ್ಧಾರದ ಪ್ರಕಾರ, 2006ರ ಏಪ್ರಿಲ್‌ 1ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿದ್ದ ಹುದ್ದೆಗಳಿಗೆ ನಂತರ ನೇಮಕಗೊಂಡು ಪ್ರಸ್ತುತ NPS ವ್ಯಾಪ್ತಿಯಲ್ಲಿರುವ ಅರ್ಹ ಶಿಕ್ಷಕರನ್ನು OPSಗೆ ಸೇರಿ ಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದಿಂದ ಹಳೆ ಪಿಂಚಣಿ ಯೋಜನೆಗೆ ಬೇಡಿಕೆ ಇಡುತ್ತಿದ್ದ ಶಿಕ್ಷಕರಿಗೆ ದೊಡ್ಡ ಮಟ್ಟದ ಪರಿಹಾರ ದೊರೆಯಲಿದೆ.

ಒಟ್ಟು 3,773 ಶಿಕ್ಷಕರು NPSನಿಂದ OPSಗೆ ಸೇರ್ಪಡೆ ಯಾಗಲು ಅರ್ಹರಾಗಿದ್ದಾರೆ ಆದರೆ ಈ ಪ್ರಕ್ರಿಯೆಯಲ್ಲಿ ಶಿಕ್ಷಕರ ನೇಮಕಾತಿ ದಿನಾಂಕ ಮಾತ್ರವಲ್ಲದೆ ಅವರು ನೇಮಕಗೊಂಡ ಹುದ್ದೆಗೆ ಸಂಬಂಧಿಸಿದ ನೇಮಕಾತಿ ಅಧಿಸೂಚನೆ ಯಾವ ದಿನಾಂಕದಲ್ಲಿ ಹೊರಬಿದ್ದಿತ್ತು ಎಂಬುದೂ ಪ್ರಮುಖವಾಗಲಿದೆ ವಿಶೇಷವಾಗಿ 2006ರ ಏಪ್ರಿಲ್‌ 1ಕ್ಕೂ ಮೊದಲು ನೇಮಕಾತಿ ಅಧಿ ಸೂಚನೆ ಪ್ರಕಟವಾಗಿದ್ದ ಹುದ್ದೆಗಳಿಗೆ ನೇಮಕಗೊಂಡಿ ರುವ ಶಿಕ್ಷಕರನ್ನು ಪರಿಗಣಿಸಲಾಗುತ್ತದೆ.

ಅರ್ಹ ಶಿಕ್ಷಕರನ್ನು ಗುರುತಿಸುವ ಸಲುವಾಗಿ ಅವರ ಸೇವಾ ಪುಸ್ತಕ ಮತ್ತು ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಶಿಕ್ಷಕರ ಸೇವಾ ಪುಸ್ತಕದಲ್ಲಿ ದಾಖಲಾಗಿರುವ ನೇಮಕಾತಿ ವಿವರಗಳು ನೇಮಕಾತಿ ಅಧಿಸೂಚನೆಯ ದಿನಾಂಕ, ಸೇವೆಗೆ ಸೇರಿದ ದಿನಾಂಕ ಸೇರಿದಂತೆ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಅರ್ಹರನ್ನು ಗುರುತಿಸುವ ಪ್ರಕ್ರಿಯೆ ನಡೆಯಲಿದೆ ಈ ಪರಿಶೀಲನೆ ಪೂರ್ಣಗೊಂಡ ನಂತರ ಅರ್ಹ ಶಿಕ್ಷಕರಿಗೆ OPS ವ್ಯಾಪ್ತಿಗೆ ಸೇರ್ಪಡೆಯಾಗುವ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಸಾರಥಿ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಜುಟ್ಟಲ್ ನೇಮಕ.....ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ.....CM ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ನಿಯೋಗ.....ಷಡಾಕ್ಷರಿ ಯವರ ನೇತೃತ್ವದಲ್ಲಿ ಭೇಟಿಯಾದ ಟೀಮ್.....ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಭಾಗ್ಯ.....NPS ನಿಂದ OPS ಸೇರ್ಪಡೆ.....ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....