LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ಆರಂಭವಾಗಲಿದೆ ನಮ್ಮ ಶಾಲೆ ನಮ್ಮ ಕೊಡುಗೆ ಕಾರ್ಯಕ್ರಮ ವಿಶೇಷ ಕಾರ್ಯಕ್ರಮಕ್ಕೆ ಮುಂದಾದ ಶಿಕ್ಷಣ ಸಚಿವರು.....

ಬೆಂಗಳೂರು -

ಕೋವಿಡ್‌ನಿಂದ ಶಿಕ್ಷಣ ಕ್ಷೇತ್ರಕ್ಕೂ ಸಂಕಷ್ಟ ಎದುರಾಗಿದೆ. ಅದರಿಂದ ಹೊರಬರಲು ಹಾಗೇ ಶಾಲೆಗಳನ್ನು ಇನ್ನಷ್ಟು ಅಭಿವೃದ್ಧಿ ಮಾಡುವ ಉದ್ದೇಶದಿಂದ ರಾಜ್ಯದ ಸರ್ಕಾರಿ ಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಕೊಡುಗೆ ಎಂಬ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಇದನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು

ಹೌದು ಈ ಒಂದು ಯೋಜನೆ ಆರಂಭ ಮಾಡಲು ಮುಂದಾಗಿದ್ದೇವೆ. ಇದಕ್ಕಾಗಿ ಹೊಸ ಆಯಪ್‌ ಕೂಡ ಪರಿಚಯಿಸಲಿದ್ದೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿಕ್ಷಣವು ಕೇವಲ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಲ್ಲ ಇದರಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೂ ಬಹಳ ಮುಖ್ಯ ಎಂದರು

ಸರ್ಕಾರದ ಜೊತೆ ಅವರೂ ಕೈಜೋಡಿಸಿದರೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಸಾಧ್ಯ ಕೆಲ ಸ್ವಯಂ ಸೇವಾ ಸಂಸ್ಥೆ ಗಳು (ಎನ್‌ಜಿಒ) ಹಾಗೂ ಐಟಿ ಉದ್ಯೋಗಿಗಳು ಸರ್ಕಾರಿ ಶಾಲೆಗಳ ಏಳಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.ಇನ್ನೂ ಪ್ರಮುಖವಾಗಿ ಕೋವಿಡ್‌ ಬಳಿಕ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚುತ್ತಿದೆ.ಶಾಲೆಗಳಲ್ಲಿ ಗುಣಮ ಟ್ಟದ ಶಿಕ್ಷಣವನ್ನೂ ನೀಡಲಾಗುತ್ತಿದೆ.

ನಾವು ಮಾಡುತ್ತಿರುವ ಕಾರ್ಯವನ್ನು ಬಿಂಬಿಸಿಕೊಳ್ಳುವಲ್ಲಿ ನಾವು ಹಿಂದೆ ಬೀಳುತ್ತಿದ್ದೇವೆ.ಸರ್ಕಾರಿ ಶಾಲೆಗಳಲ್ಲಿ ಕಲಿತ ವರು ಯುಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ತೋರುತ್ತಿದ್ದಾರೆ.ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸುವ ಯೋಚನೆಯೂ ಇದೆ.1 ರಿಂದ 5ನೇ ತರಗತಿಗಳ ಯಶಸ್ಸನ್ನು ಆಧರಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರದಿಂದಲೇ ಟಿಇಟಿ ತರಬೇತಿ ಗುಣಮಟ್ಟದ ಶಿಕ್ಷಕರ ನೇಮಕಾತಿಗೆ ಅನುವಾಗಲಿ ಎಂಬ ಉದ್ದೇಶದಿಂದ ಸರ್ಕಾರ ದಿಂದಲೇ ಟಿಇಟಿ ಹಾಗೂ ಸಿಇಟಿ ತರಬೇತಿ ನೀಡುವ ಯೋಜನೆ ಸಿದ್ಧಪಡಿಸಲಾಗಿದ್ದು ಇದನ್ನು ಶೀಘ್ರವೇ ಜಾರಿಗೊಳಿಸಲಾಗುತ್ತದೆ.ಹಾಗೆ ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ತಲಾ ಒಂದು ಮಾದರಿ ಶಾಲೆಗಳನ್ನು ನಿರ್ಮಿಸುವ ಗುರಿ ಇದೆ.1 ರಿಂದ 5ನೇ ತರಗತಿ ಆರಂಭಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರೇ ಆಸಕ್ತಿ ತೋರುತ್ತಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ಹಾಜರಾತಿ ಪ್ರಮಾಣ ಉತ್ತಮವಾಗಿದೆ ಎಂದರು.

ವಿವಿಧ ಕಾರಣಗಳಿಂದಾಗಿ ಅನೇಕ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ.ಗ್ರಾಮೀಣಾಭಿವೃದ್ಧಿ ಇಲಾಖೆಯ ನೆರವಿನೊಂದಿಗೆ ಮನೆ ಮನೆಗೆ ಹೋಗಿ ಮಕ್ಕಳನ್ನು ಕರೆತರುವ ಕೆಲಸ ಮಾಡಲಾಗುತ್ತಿದೆ.ಇನ್ನೊಂದು ತಿಂಗಳಲ್ಲಿ ಅವರೆಲ್ಲಾ ತರಗತಿಗಳಿಗೆ ಹಾಜರಾಗುವಂತೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....