LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಹುದ್ದೆ ಹೆಚ್ಚಿಸಲು ಆಗ್ರಹ ಪ್ರತಿಭಟನೆ - DDPI ಗೆ ಮನವಿ ಸಲ್ಲಿಕೆ.....

ಕೊಪ್ಪಳ -

ಶಿಕ್ಷಕರ ಹುದ್ದೆ ಹೆಚ್ಚಿಸಲು ಆಗ್ರಹಿಸಿ ಕೊಪ್ಪಳ ದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು ಹೌದು ಹೆಚ್ಚುವರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (ಜಿಪಿಎಸ್‌ ಟಿಆರ್‌) ಹಾಗೂ ಪ್ರೌಢಶಾಲಾ ಶಿಕ್ಷಕರ (ಎಚ್‌ಎಸ್‌ ಟಿಆರ್‌) ಹುದ್ದೆಗಳನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.

ಡಿಡಿಪಿಐ ಶ್ರೀಶೈಲ ಬಿರಾದಾರ ಅವರಿಗೆ ಮನವಿ ಸಲ್ಲಿಸಿ
ಕಲ್ಯಾಣ ಕರ್ನಾಟಕದಲ್ಲಿ 14,107 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಕನಿಷ್ಠ 12,000 ಅಧಿಕವಾಗಿ ಪ್ರಾಥಮಿಕ ಮತ್ತು ಪ್ರೌಢ (ಮಾಧ್ಯಮಿಕ) ಶಿಕ್ಷಕರ ನೇಮಕಾತಿ ಹೆಚ್ಚಿಸ ಬೇಕು  2023ರಲ್ಲಿ ಬಿ. ಇಡಿ ಮತ್ತು ಟಿ.ಇ.ಟಿನಲ್ಲಿ ಅರ್ಹತೆ ಪಡೆದವರು 70 ಸಾವಿರ ಅಭ್ಯರ್ಥಿಗಳು ಈ ಭಾಗದಲ್ಲಿ ದ್ದಾರೆ. ಅಲ್ಲದೆ ಒಟ್ಟು 22 ಸಾವಿರ ಅಧಿಕ ಶಿಕ್ಷಕ ಹುದ್ದೆ ಗಳು ಖಾಲಿಯಿವೆ ಎಂದರು.

'2022ರಲ್ಲಿ ಶಿಕ್ಷಕ ನೇಮಕಾತಿ ನಡೆದಿದ್ದು ಇಲ್ಲಿಯವರೆಗೆ ಯಾವುದೇ ಶಿಕ್ಷಕ ನೇಮಕಾತಿ ಪ್ರಕ್ರಿಯೆ ನಡೆಯದಿರು ವುದರಿಂದ ಈ ಭಾಗದ ಶೈಕ್ಷಣಿಕ ಪ್ರಗತಿ ಕುಂಠಿತಗೊಂ ಡಿದೆ. ಹಿಂದಿನ ಮತ್ತು ಸದ್ಯದ ಸ್ಥಿತಿಯನ್ನು ಗಮನಿಸಿ ನೇಮಕಾತಿಯಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಿ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿ ಬಲಗೊಳಿಸಬೇಕು' ಎಂದು ಆಗ್ರಹಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಾಲಾಜಿ, ಪದಾಧಿಕಾ ರಿಗಳಾದ ಮಾರುತಿ, ಅಮರೇಶ್ ಲಿಂಗದಹಳ್ಳಿ, ಅಮರಯ್ಯ ಹಿರೇಮಠ, ಆಕಾಂಕ್ಷಿಗಳಾದ ಜಗದೀಶ ಗೌಡ, ಪ್ರಸನ್ನಕುಮಾರ, ಮರಿಯಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಕೊಪ್ಪಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...