ಮಂಗಳೂರು -
ಮಹಿಳೆಯೊಬ್ಬರ ಜೊತೆ ಮಾತನಾಡುವಾಗ ಪಶ್ಚಿಮ ಘಟ್ಟದ ಆಚೆಗಿನ ಪ್ರದೇಶದ ಪೊಲೀಸ್ ಸಿಬ್ಬಂದಿ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ತಮ್ಮ ಕಾರು ಚಾಲಕ ಅರುಣ್ ಆಳ್ವ ಎಂಬು ವರನ್ನು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಮಾನತು ಮಾಡಿದ್ದಾರೆ.ನಗರದಲ್ಲಿ ಮೈದಾನ ದಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಮಾಯಕ ವ್ಯಕ್ತಿಯಿಂದ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಈಚೆಗೆ ಅಮಾನತು ಮಾಡಲಾಗಿತ್ತು.
ದೂರು ನೀಡಿದ ಸಂತ್ರಸ್ತ ವ್ಯಕ್ತಿಯಿಂದ ಆ ಕಾನ್ ಸ್ಟೆಬಲ್‌ಗಳು ಈ ಹಿಂದೆ ಎರಡು ಸಲ ಹಣ ಸುಲಿಗೆ ಮಾಡಿದ್ದರು. ಈ ಬಗ್ಗೆ ಸಂತ್ರಸ್ತ ವ್ಯಕ್ತಿ ನೀಡಿದ್ದ ದೂರಿನ ಅನ್ವಯ ಆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಮಹಿಳೆ ಯೊಬ್ಬರ ಜೊತೆ ಚರ್ಚಿಸುವ ವೇಳೆ ಕಾರು ಚಾಲಕ ಕೆಲವೊಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ. ಈ ಕುರಿತ ವಿಚಾರಣೆಯನ್ನು ಕಾಯ್ದಿರಿಸಿ ಕಾರು ಚಾಲಕ ನನ್ನು ಅಮಾನತು ಮಾಡಲಾಗಿದೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಗಳೂರು.....