LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಪೇದೆ ಆತ್ಮಹತ್ಯೆ - 2012ರ ಬ್ಯಾಚ್ ನ ಪ್ರಶಾಂತ ನೇಣು ಹಾಕಿಕೊಂಡು ಆತ್ಮಹತ್ಯೆ.....

ಗದಗ  -

ಕೌಟುಂಬಿಕ‌ ಕಲಹದಿಂದ ಬೇಸತ್ತು ಪೊಲೀಸ್ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಗದಗ ನಲ್ಲಿ ನಡೆದಿದೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹನುಮ ನಾಳ ಗ್ರಾಮದ ಪ್ರಶಾಂತ ಕಂಚೇರಿ (33) ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರ ಬ್ಯಾಚ್ ನ ಜಿಲ್ಲಾ ಸಶಸ್ತ್ರ‌ ಮೀಸಲು ಪಡೆಯ ಪೊಲೀಸ್ ಕಾನ್ಸಟೇಬಲ್ ಆಗಿ, ಸದ್ಯ (ASC) ಬಾಂಬ್ ನಿಷ್ಕ್ರಿಯ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಸತಿ ಗೃಹದಲ್ಲಿ ವಾಸವಾಗಿದ್ದ ಪ್ರಶಾಂತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಕೆಲಸದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದ ಪ್ರಶಾಂತ, ಸಾವಿಗೆ ಶರಣಾಗಿರು ವದು ಅವರ ಸ್ನೇಹಿತರ ಬಳಗಕ್ಕೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಆಘಾತ ಉಂಟು‌ ಮಾಡಿದೆ.

ಪತ್ನಿ ಹಾಗೂ ಮಗುವನ್ನು ಅಗಲಿರೋ ಪ್ರಶಾಂತ ಸಾವಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಸಶಸ್ತ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳು‌ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳೆಲ್ಲರೂ ಸಂತಾಪ ವ್ಯಕ್ತಪಡಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಗದಗ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......