LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸೆಕ್ಸ್ ಸಿಡಿ ಬಿಡುಗಡೆ ಮಾಡಿದವರ ಮನೆಗೆ ಪೊಲೀಸ್ ಕಾವಲು

ರಾಮನಗರ -

ಸೆಕ್ಸ್ ಸಿಡಿ ಬಿಡುಗಡೆ ಮಾಡಿ ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಬುಧವಾರ ಭದ್ರತೆ ಒದಗಿಸಿದ್ದಾರೆ.

'ನಾನು ನೀಡಿರುವ ದೂರಿನಿಂದ ಜಾರಕಿಹೊಳಿ ಬೆಂಬಲಿಗರು ಆಕ್ರೋಶಗೊಂಡಿದ್ದು, ದೂರವಾಣಿ ಕರೆಗಳ ಮೂಲಕ ನನಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ. ಅಲ್ಲದೇ ನಾನು ಓಡಾಡುವ ಸ್ಥಳಗಳಲ್ಲಿ ಅಪರಿಚಿತರ ಗುಂಪು ನನ್ನನ್ನು ಹಿಂಬಾಲಿಸುತ್ತಿದ್ದು, ನಾನು ಹಾಗೂ ನನ್ನ ಕುಟುಂಬದವರಿಗೆ ಭಯ ಹುಟ್ಟಿಸಲು ಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಭದ್ರತೆ ಒದಗಿಸಬೇಕು' ಎಂದು ಕೋರಿ ಅವರು ಬುಧವಾರ ಸಂಜೆ ಕನಕಪುರ ಗ್ರಾಮೀಣ ಠಾಣೆಯಲ್ಲಿ ದೂರು ಸಲ್ಲಿಸಿದರು.

ಇನ್ನೂ ಪ್ರಕರಣ ಸಂಬಂಧ ಇಂದು ಬೆಳಿಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್‌ಪಾರ್ಕ್‌ ಠಾಣೆ ಪೊಲೀಸರು ದೂರುದಾರ ದಿನೇಶ್‌ ಅವರಿಗೆ ಬುಧವಾರ ನೋಟಿಸ್ ನೀಡಿದ್ದಾರೆ.

ಇನ್ನೂ ಇದೇ ವೇಳೆ ದಿನೇಶ್ ಅವರು ಮಾತನಾಡಿ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದಿರುವುದು ಸ್ವಾಗತಾರ್ಹ. ರಾಜ್ಯದ ಕೆಲವು ಸಚಿವರು, ಹಲವು ಪ್ರಭಾವಿ ರಾಜಕಾರಣಿಗಳ ಅಕ್ರಮಗಳ ದಾಖಲೆಗಳೂ ನನ್ನಲ್ಲಿ ಇವೆ. ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಬಹಿರಂಗಪಡಿಸುತ್ತೇನೆ' ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....