LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕೋವಿಡ್ ನಿಯಂತ್ರಣಕ್ಕೆ ಸಾರಿಗೆ ಸಂಸ್ಥೆಯಿಂದ ಮುನ್ನೆಚ್ಚರಿಕೆ ಕ್ರಮ

ಹುಬ್ಬಳ್ಳಿ -

ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿ ಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ,ಬಸ್ ಡಿಪೋಗಳು, ಹಳೆ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಮತ್ತು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ, ನವಲಗುಂದ,ಅಣ್ಣಿಗೇರಿ,ಕಲಘಟಗಿ ಬಸ್ ನಿಲ್ದಾಣ ಸೇರಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ರವಿವಾರ ಸೋಡಿ ಯಂ ಹೈಪೋಕ್ಲೋರೈಡ್ ದ್ರಾಣದಿಂದ ಸ್ಯಾನಿಟೇಷ ನ್ ಮಾಡಲಾಯಿತು.

ಕೋವಿಡ್ ಎರಡನೆ ಅಲೆ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನಗಳ ಪ್ರಕಾರ ಸಾರಿಗೆ ಸಂಸ್ಥೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಬಸ್ಸುಗಳನ್ನು ನಿತ್ಯ ಸ್ಯಾನಿಟೇಷನ್ ಮಾಡಲಾಗುತ್ತದೆ. ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾ ಯಗೊಳಿಸಲಾಗಿದೆ.ಬಸ್ಸುಗಳಲ್ಲಿ ಆಸನಗಳ ಸಂಖ್ಯೆ ಯ ಶೇಕಡಾ 50ರಷ್ಟು ಜನರು ಮಾತ್ರ ಪ್ರಯಾಣಿಸ ಲು ಅನುಮತಿಸಲಾಗುತ್ತದೆ.ಕೋವಿಡ್ ನಿಯಮಾವ ಳಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರು ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದ್ದಾರೆ

ಇನ್ನೂ ಇದರೊಂದಿಗೆ ಕೊರೊನಾ ಸೋಂಕು ಹರಡು ವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಪಾಲ ನೆಯ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್ ಗಳಲ್ಲಿ ಕೊರೊನಾ ದಿಂದ ರಕ್ಷಿಸಿಕೊಳ್ಳಲು ತಪ್ಪದೆ ಮಾಸ್ಕ್ ಧರಿಸಿರಿ" "ಬಸ್ ಮತ್ತು ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸು ವುದು ಕಡ್ಡಾಯ" "ನಿಮ್ಮ ಸುರಕ್ಷತೆಗಾಗಿ ಸ್ಯಾನಿಟೈಸ ರ್ ಬಳಸಿರಿ" ಮುಂತಾದ ಸಂದೇಶಗಳನ್ನು ಮುದ್ರಿಸ ಲಾಗುತ್ತಿದೆ.

ಇನ್ನೂ ಇದರೊಂದಿಗೆ ಕೋವಿಡ್ ಎರಡನೇ ಅಲೆಯ ಪರಿಣಾಮ ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಚರಿಸುವ ಎಲ್ಲಾ ಮಾದ ರಿಯ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...