LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಸಲ್ಲಿಕೆಯಾಯಿತು ಹೊಸ ಶಿಕ್ಷಕರ ನೇಮಕಾತಿ ಗಾಗಿ ಪ್ರಸ್ತಾವನೆ ನೆನಗುದಿಗೆ ಬಿತ್ತಾ ಶಿಕ್ಷಕರ ವರ್ಗಾವಣೆ ವಿಚಾರ ಪ್ರಸ್ತಾಪ.....

ಬೆಂಗಳೂರು -

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತ ರಿಸಿದ ಅವರು ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗ ಲಿದೆ ಎಂದರು.

ಉಳಿದಂತೆ ಸರ್ಕಾರಿ,ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ ಹೆಚ್ಚು ಶಿಕ್ಷಕರು ಮತ್ತು ಚಿತ್ರಕಲೆಯಲ್ಲಿ 2800 ಕ್ಕೂ ಹೆಚ್ಚು ಶಿಕ್ಷಕರೂ ಕೆಲಸ ನಿರ್ವಹಿಸುತ್ತಿದ್ದಾರೆ.ಖಾಲಿ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ ಕೈಗೊ ಳ್ಳುವುದಾಗಿ ಹೇಳಿದರು.

ಈ ವೇಳೆ ಹಿರಿಯ ಸದಸ್ಯ ಅಯನೂರು ಮಂಜುನಾಥ್ ಅವರು ಮಧ್ಯೆಪ್ರವೇಶಿಸಿ,ತಮ್ಮ ಇಲಾಖೆಯ ಮಾಹಿತಿಗ ಳನ್ನು ಮಾತ್ರ ನೀಡಬೇಕು.ಬೇರೊಂದು ಇಲಾಖೆಯತ್ತ ಬೆರಳು ಮಾಡಬಾರದು.ಆರ್ಥಿಕ ಇಲಾಖೆಯಿಂದ ಅನು ಮತಿ ಪಡೆದು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಜೆಡಿಎಸ್‍ನ ಶರವಣ ಅವರು ಸಚಿವರ ಅಸಮರ್ಥತೆ ಎಂದು ಛೇಡಿಸಿದಾಗ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.14 ವರ್ಷಗಳಿಂದ ನೇಮಕಾತಿ ನೆನೆಗುದಿಗೆ ಬಿದ್ದಿರುವುದರಿಂದಾಗಿ ಹುದ್ದೆಗಳು ಖಾಲಿ ಉಳಿದಿವೆ ಎಂದು ಸಚಿವರು ಹೇಳಿದರು.

ನಂತರ ಸದಸ್ಯರಾದ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಖಾಸಗಿ ಅನುದಾನಿತ ಪ್ರಾಥ ಮಿಕ ಶಾಲೆಗಳಲ್ಲಿ 2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾ ಗಿತ್ತು.ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾ ವನೆಯನ್ನೇ ಕಳುಹಿಸಲಿಲ್ಲ. 171 ಹುದ್ದೆಗಳ ಪ್ರಸ್ತಾವನೆ ಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ನೆನೆಗುದಿಗೆ ಬಿದ್ದಿವೆ ಎಂದು ಹೇಳಿದರು.

ಸದಸ್ಯ ಸಂಕನೂರ ಮಾತನಾಡಿ ಸುಮಾರು 11,125 ಹುದ್ದೆಗಳು ಬಾಕಿ ಉಳಿದಿವೆ.ಹೊಸದಾಗಿ ನೀಡಲಾಗಿರುವ ಅಂಕಿ ಅಂಶಗಳ ಪ್ರಕಾರ 9158 ಹುದ್ದೆಗಳಲ್ಲಿ ಭರ್ತಿ ಮಾಡಿ ಕೊಳ್ಳಬೇಕಿದೆ.ಇಷ್ಟು ಹುದ್ದೆಗಳನ್ನು ಖಾಲಿ ಇಟ್ಟು ಹೇಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮತಿ ನೀಡಿ ರುವ ಹುದ್ದೆಗಳಿಗೆ ಪ್ರಸ್ತಾವನೆಗಳು ಸರಿಯಾಗಿ ಬಂದಿಲ್ಲ. ನೇಮಕಾತಿಗೆ ಅನುಮತಿ ಪಡೆಯಲು ಕಷ್ಟಸಾಧ್ಯವಾಗಿದೆ ಎಂದರು.

ಸದಸ್ಯರಾದ ಬಸವರಾಜ ಹೊರಟ್ಟಿ ಸೇರಿದಂತೆ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೇಮಕಾತಿ ಪ್ರಕ್ರಿಯೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಯವರ ಜೊತೆ ವಿಧಾನಪರಿಷತ್ ಸದಸ್ಯರ ನ್ನೊಳಗೊಂಡ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸುವು ದಾಗಿ ಸಚಿವರು ಭರವಸೆ ನೀಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...