LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಪುಟ್ ಪಾತ್ ತೆರುವು ಕಾರ್ಯಾಚರಣೆ.....

ಹುಬ್ಬಳ್ಳಿ-

ಸಾರ್ವಜನಿಕರ ಮನವಿ ಮೇರೆಗೆ ಹುಬ್ಬಳ್ಳಿಯ ಕೋಪ್ಪಿಕರ್ ಹಾಗೂ ದಾಜೀಬಾನ್ ಪೇಟೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು‌ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ದಾಜೀಬಾನ್ ಪೇಟೆ, ಪೆಂಡಾರಗಲ್ಲಿ,‌ ಬೆಳವಾಗ್ ಗಲ್ಲಿ, ದುರ್ಗದ ಬೈಲು, ಕಲಾದಗಿ ಓಣಿಗಳಲ್ಲಿ ಅನಧಿಕೃತವಾಗಿ ಪಾಲಿಕೆ ಜಾಗವನ್ನು ಒತ್ತುವರಿ ಮಾಡಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಚರಣೆ ನೇತೃತ್ವ ವಹಿಸಿದ ಕಾರ್ಯಾಚರಣೆ ಮಾಡಿದರು.

ಕಳೆದ ಹದಿನೈದು ದಿನಗಳ ಹಿಂದೆ ಜಿಲ್ಲಾಡಳಿತ, ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ಸಹಯೋಗದಲ್ಲಿ ಒತ್ತುವರಿ ತೆರವು ಮಾಡಿ ಎಚ್ಚರಿಕೆ ನೀಡಲಾಗಿತ್ತು.ವ್ಯಾಪರಿಗಳಿಗೆ ಪುನಃ ಪುಟ್ ಪಾತ್ ಒತ್ತುವರಿ ಮಾಡಿ ವ್ಯಾಪಾರ ಮಾಡುತ್ತಿದ್ದಾರೆ. ಆದ್ದರಿಂದ ರಸ್ತೆ ಹಾಗೂ ಪುಟ್ ಪಾತ್ ಮೇಲೆ ಇರಿಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಒತ್ತುವರಿ ಕಾರ್ಯಾಚರಣೆ ಇಂದಿಗೆ ಮುಗಿಯುವು ದಿಲ್ಲ. ಪ್ರತಿದಿನ ಮುಂದುವರಿಸಲಾಗುವದು. ಹುಬ್ಬಳ್ಳಿ ನಗರದ ಕೊಪ್ಪಿಕರ್ ಹಾಗೂ ದಾಜಿಬಾನ್ ಪೇಟೆ ರಸ್ತೆಗಳು ಹೆಸರು ವಾಸಿಯಾಗಿವೆ. ರಸ್ತೆಗಳು ಸಾಕಷ್ಟು ಅಗಲವಾಗಿದ್ದರು, ವ್ಯಾಪಾರಿಗಳು ರಸ್ತೆ ಹಾಗೂ ಪುಟ್ ಪಾತ್ ಒತ್ತುವರಿ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು.
ಪಾಲಿಕೆಯಿಂದ 24 ಕಡೆ ಪಾದಯಾತ್ರಿಗಳ ಸಂಚಾರಿ ವಲಯಗಳನ್ನು ಗುರುತಿಸಲಾಗಿದೆ.

ಶೀಘ್ರವಾಗಿ ಅಧಿಸೂಚನೆ ಹೊರಡಿಸಲಾಗುವುದು. ರಸ್ತೆ ಬದಿ ವ್ಯಾಪಾರಿಗಳಿಗಿಂತ ಮಳಿಗೆ ಹೊಂದಿರುವ ವ್ಯಾಪಾರಿಗಳು ಫುಟ್ ಪಾತ್ ಗಳನ್ನು ಅತಿಕ್ರಮಿಸಿ ದ್ದಾರೆ. ಅಂಗಡಿಯನ್ನು ಗೋಡನ್ ತರ ಬಳಸಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಇಂತಹ ವ್ಯಾಪಾರಿಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪಾಲಿಕೆಯಿಂದ ಕಾರ್ಯಾಚರಣೆ ಮುಂದುವರಿಸು ತ್ತಾರೆ. ಅಂಗಡಿಗಳ ಮಾಲಿಕರಿಗೆ ಎಚ್ಚರಿಕೆ ನೀಡಲಾಗುವುದು. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಪಾರ್ಕಿಂಗ್ ಸಲುವಾಗಿ 94 ರಸ್ತೆಗಳನ್ನು ಗುರುತಿಸಲಾಗಿದೆ.ಇದನ್ಮು ಪಾಲಿಕೆಯಿಂದ ಪೊಲೀಸ್ ಕಮಿಷನರ್ ಅವರಿಗೆ ಕಳುಹಿಸಿಕೊಡ ಲಾಗಿದೆ. ಶೀಘ್ರವಾಗಿ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸುವರು. 54 ಬೀದಿ ಬದಿ ವ್ಯಾಪಾರಿ ರಸ್ತೆಗಳನ್ನು ಸಹ ಗುರುತಿಸ ಲಾಗಿದೆ ಇದನ್ನು ಅಧಿಸೂಚಿಸಲಾಗಿದೆ. ಕೊಪ್ಪಿಕರ್ ಹಾಗೂ ದಾಜಿಬಾನ್ ಪೇಟೆ ರಸ್ತೆಗಳು‌ 18‌ ಮೀಟರ್ ಅಗಲವಾಗಿವೆ. ನಕ್ಷೆಯ ಅನುಸಾರ ರಸ್ತೆಯನ್ನು ಅಳೆದು ಒತ್ತುವರಿಯಾಗಿದ್ದರೆ ಅದನ್ನು ಸಹ ತೆರವುಗೊಳಿಸಲಾಗುವುದು ಎಂದರು.

ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪ ಪೊಲೀಸ್ ಆಯುಕ್ತ ರಾಮರಾಜನ್, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣಾ, ಹುಬ್ಬಳ್ಳಿಯ ತಹಶಿಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ಪಾಲಿಕೆ ವಲಯ ಅಧಿಕಾರಿಗಳು, ಪೊಲೀಸ್ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತಿರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......