LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷಿಪ್ರ ರಾಜಕೀಯ ಬೆಳವಣಿಗೆ - CM ಭೇಟಿಯಾದ 30 ಕ್ಕೂ ಹೆಚ್ಚು ಶಾಸಕರು

ಬೆಂಗಳೂರು -

ರಾಜ್ಯ ರಾಜಕೀಯದಲ್ಲಿ ಕ್ಷಿಪ್ರವಾಗಿ ರಾಜಕೀಯ ಬೆಳವಣಿಗೆಯಾಗಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಶಾಸಕರು ದೂರು ಕೊಟ್ಟಿದ್ದಾರೆ.ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಬಿಎಸ್ ವೈ ಭೇಟಿಯಾಗಿ ದೂರು ನೀಡಿದ್ದಾರೆ. 30 ಕ್ಕೂ ಹೆಚ್ಚು ಬಿಜೆಪಿ ಶಾಸಕರಿಂದ ಯತ್ನಾಳ್ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಯತ್ನಾಳ್ ಹೇಳಿಕೆಗಳು ಪಕ್ಷಕ್ಕೆ ಭಾರೀ ಮುಜುಗರ ತರುತ್ತಿವೆ. ಮುಂದೆ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿವೆ. ಅಲ್ಲದೇ ಉಪಚುನಾವಣೆಯನ್ನು ಎದರಿಸುತ್ತಿದ್ದೇವೆ. ಇಂಥಹ ಸಮಯದಲ್ಲಿ ಯತ್ನಾಳ್ ಬಾಯಿಗೆ ಬಂದ ಹಾಗೇ ಮಾತಮಾಡುತ್ತಿದ್ದಾರೆ. ಇದಕ್ಕೆ ನೀವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಒತ್ತಾಯ ಮಾಡಿದ್ದಾರೆ.

ಇದಲ್ಲದೇ ಕೆಲ ಸಚಿವರುಗಳ ವಿರುದ್ಧವೂ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಕೆಲ ಸಚಿವರು ನಮ್ಮ ಮಾತುಗಳನ್ನ ಕೇಳುತ್ತಿಲ್ಲ ಎಂದು ಸಿಎಂ ಬಳಿ ದೂರು ಹೇಳಿಕೊಂಡಿದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿ ದ್ದರು ನಮ್ಮ ಸಚಿವರೇ ನಮ್ಮ ಮಾತು ಕೇಳುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಸಿಎಂ ಭೇಟಿ ನಂತರ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ. ಮಾನ್ಯ ಮುಖ್ಯ ಮಂತ್ರಿಗಳನ್ನು 40 ಕ್ಕೂ ಹೆಚ್ಚು ಶಾಸಕರು ಭೇಟಿ ಮಾಡಿದ್ದೇವೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಯಿತು. 25ಕ್ಕೆ ಚರ್ಚೆಯನ್ನು ಮುಂದೂಡಲಾಗಿದೆ. ನಮ್ಮ ಕ್ಷೇತ್ರಗಳ ಅಭಿವೃದ್ದಿ ಕೆಲಸಗಳ ಬಗ್ಗೆ ಸಿಎಂ ಗೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಳು ಪ್ರಾರಂಭವಾಗಲಿವೆ ಆಗ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...