LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ - ನಿದ್ರೆ ಮಾತ್ರೆ ಸೇವಿಸಿದ ಸಂತೋಷ್

ಬೆಂಗಳೂರು- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಪ್ತ ಎನ್.ಆರ್. ಸಂತೋಷ ಆತ್ಮಹತ್ಯೆ ಯತ್ನ ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರು ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ಶುಕ್ರವಾರ ರಾತ್ರಿ 7.30ರ ಹೊತ್ತಿಗೆ ನಿದ್ರೆ ಮಾತ್ರೆಗಳನ್ನು ಸೇವಿಸಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಅತ್ತ ಈ ಒಂದು ವಿಷಯ ತಿಳಿದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ಧಾವಿಸಿದ್ದು, ಸಂತೋಷ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರಂತೆ.

ತಮ್ಮ 22ನೇ ವಯಸ್ಸಿನಲ್ಲೇ ಯಡಿಯೂರಪ್ಪ ಸಹಾಯಕರಾಗಿ ಸೇರಿಕೊಂಡಿರುವ ಸಂತೋಷ್, 32ನೇ ವಯಸ್ಸಿನಲ್ಲಿ, ಅಂದರೆ ಕಳೆದ ಮೇ 28 ರಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಎನ್.ಆರ್. ಸಂತೋಷ್ ಅವರು ಕೃಷಿಕ ಕುಟುಂಬದಿಂದ ಬಂದವರು. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಪದವಿವರೆಗೆ ಶಿಕ್ಷಣ ಪಡೆದಿದ್ದಾರೆ. 2006 ರಿಂದ 2012ರ ವರೆಗೆ ಎಪಿವಿಪಿ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ನಂತರ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ತಮ್ಮ 22ನೇ ವಯಸ್ಸಿನಲ್ಲೇ ಕೆಲಸ ಆರಂಭಿಸಿದ್ದಾರೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿ ಶಾಸಕ ನಾಗಬೇಕು ಎಂಬ ಆಸೆಯನ್ನು ಹೊತ್ತಿದ್ದ ಸಂತೋಷ್ ಮೂರ್ನಾಲ್ಕು ತಿಂಗಳಿನಿಂದ ಅರಸೀಕೆರೆ ಕ್ಷೇತ್ರದ ಸಾಮಾಜಿಕ ಚಟುವಟಿಕೆಗಳಲ್ಲಿ ಮತ್ತು ರಾಜಕೀಯವಾಗಿ ಮುಂಚೂಣಿಯಲ್ಲಿದ್ದರು.

ಆದರೆ ಅರಸೀಕೆರೆ ಕ್ಷೇತ್ರಕ್ಕೆ ಬಂದ ಬಳಿಕ ಸ್ವಪಕ್ಷೀಯರ ಜೊತೆ ಹೊಂದಾಣಿಕೆ ಇಲ್ಲದೆ ಬಿಜೆಪಿ ಪಕ್ಷದಲ್ಲಿ ಎರಡು ಬಣಗಳಾಗಿತ್ತು. ಸಂತೋಷ್ ವಿರೋಧಿ ಬಣ ವಾಗಿರುವ ಮತ್ತೊಂದು ಬಿಜೆಪಿ ತಂಡ ಸಂತೋಷ್ ಸಾಂಸಾರಿಕ ಜೀವನದ ವಿಚಾರವನ್ನ ಎಳೆದು ಅವರಿಗೆ ಹಿಂದೆಯೇ ಅಪಮಾನ ಮಾಡಿದರು. ಇದಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಜೊತೆಯು ಕೂಡ ಒಡನಾಟದಲ್ಲಿ ಬಿರುಕು ಬಿಟ್ಟಿತ್ತು ಸಧ್ಯ ಸಂತೋಷ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತ ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದರು ಎಂಬ ಕುರಿತಾದ ಕಾರಣವನ್ನು ಪೊಲೀಸರು ಹುಡುಕುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....