ಆನೇಕಲ್ -
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಊಟದಲ್ಲಿ ಹುಳುಗಳು ಪತ್ತೆಯಾಗಿರುವುದು ಸೇರಿ ದಂತೆ ಹಲವು ಅವ್ಯವಸ್ಥೆಗಳ ವಿಚಾರ ಕುರಿತು ಇಬ್ಬರನ್ನು ಅಮಾನತು ಮಾಡಲಾಗಿದೆ ವಸತಿ ಶಾಲೆ ಯ ದುಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್‌ರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ರಾಶಿ ರಾಶಿ ಹುಳುಗಳು ಪತ್ತೆಯಾಗಿರುವುದು ಶಾಲೆಯ ಆವರಣ ದಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಮಕ್ಕಳು ತೊಂದರೆ ಅನುಭವಿಸುತ್ತಿರುವುದರ ಕುರಿತು ಮಾಧ್ಯಮ ಗಳಲ್ಲಿ ವರದಿ ಪ್ರಸಾರ ಆಗಿತ್ತು ಈ ವರದಿ ಬಳಿಕ ಎಚ್ಚೆತ್ತು ಕೊಂಡ ಅಧಿಕಾರಿಗಳ ತಂಡ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕಾದ ವಸತಿ ಶಾಲೆಯಲ್ಲಿ ಕಳಪೆ ಗುಣಮಟ್ಟದ ಊಟ ಪೂರೈಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿತ್ತು. ಊಟದಲ್ಲಿ ಹುಳುಗಳು ಕಾಣಿಸಿಕೊಂಡಿದ್ದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ ಸರಿಯಾದ ಆಹಾರ ದೊರೆಯದೆ ವಿದ್ಯಾರ್ಥಿಗಳ ಆರೋಗ್ಯದ ಮೇಲೂ ಪರಿಣಾಮ ಬೀರಿದೆ. ಹೊಟ್ಟೆ ತುಂಬ ಊಟ ವಿಲ್ಲದೆ ಮಕ್ಕಳು ಖಾಲಿ ಹೊಟ್ಟೆಯಲ್ಲೇ ಮಾತ್ರೆಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂಬ ಗಂಭೀರ ವಿಚಾರವೂ ವರದಿಯಲ್ಲಿ ಉಲ್ಲೇಖ ವಾಗಿತ್ತು.
ಇನ್ನು ಶಾಲೆಯ ಆವರಣದಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿತ್ತು. ಎಲ್ಲೆಂದರಲ್ಲಿ ಹುಳುಗಳು ಓಡಾಡುತ್ತಿದ್ದವು. ವಿದ್ಯಾರ್ಥಿಗಳು ವಾಸಿಸುವ ಸ್ಥಳ ಹಾಗೂ ಆಹಾರ ತಯಾರಿಸುವ ಪರಿಸರದಲ್ಲಿಯೂ ಸ್ವಚ್ಛತೆಯ ಕೊರತೆ ಕಂಡುಬಂದಿತ್ತು.ಇಷ್ಟೇ ಅಲ್ಲದೆ, ವಸತಿ ಶಾಲೆಯಲ್ಲಿ ವಿದ್ಯುತ್ ಸಮಸ್ಯೆಯೂ ವಿದ್ಯಾರ್ಥಿಗಳನ್ನು ಕಾಡುತ್ತಿತ್ತು. ವಿದ್ಯುತ್ ವ್ಯತ್ಯಯದಿಂದಾಗಿ ಕುಡಿಯುವ ನೀರಿನ ಪೂರೈಕೆಯಲ್ಲಿಯೂ ತೊಂದರೆ ಉಂಟಾಗಿತ್ತು ವಸತಿ ಶಾಲೆಯಲ್ಲಿನ ಅವ್ಯವಸ್ಥೆಗಳ ಕುರಿತು ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಕೆಆರ್‌ಇಐಎಸ್ (KREIS) ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಬೆಂಗಳೂರು ನಗರ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ನೇತೃತ್ವದ ತಂಡ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಈ ವೇಳೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಶಾಲೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರ ಮೂಲಭೂತ ಸೌಲಭ್ಯ ಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ.ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಶಾಲೆಯ ಪ್ರಿನ್ಸಿಪಾಲ್ ರಾಮಣ್ಣ ಹಾಗೂ ವಾರ್ಡನ್ ಮಹಾದೇವಿ ಕಾಡೆ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ತಕ್ಷಣವೇ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸ ಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸ ಬೇಕು. ಶಾಲೆಯ ಆವರಣ ಹಾಗೂ ವಿದ್ಯಾರ್ಥಿಗಳು ವಾಸಿಸುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಆನೇಕಲ್.....