LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಸಚಿವರ ಶಿಕ್ಷಕ ದಿನಾಚರಣೆ ಹೇಗಿತ್ತು ನೋಡಿ.....

ಬೆಂಗಳೂರು -

ಶಿಕ್ಷಕರ ಬಳಿ ತೆರಳಿ ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಶಾಲೆಗಳಿಗೆ ದಿಢೀರ್‌ ಭೇಟಿ ನೀಡಿ, ಶಿಕ್ಷಕರಿಗೆ ಶುಭ ಕೋರುವ ಮೂಲಕ ಶಿಕ್ಷಕ ವೃಂದದವರ ಖುಷಿಗೆ ಕಾರಣರಾದರು.
ಮೊದಲಿಗೆ ಬೆಂಗಳೂರಿನ ತಣಿಸಂದ್ರದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕ ರೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದರು.
ಶಿಕ್ಷಣ ಇಲಾಖೆಯ ಸಚಿವರೊಬ್ಬರು ಶಾಲೆಯೊಂದ ರಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ, ಶಿಕ್ಷಕರೊಂದಿಗೆ ದಿನಾಚಾರಣೆ ಆಚರಿಸಿದ್ದ ಇದೇ ಮೊದಲು.

ಸಚಿವರು ಶಾಲೆಗೆ ಆಗಮಿಸಿ ಶಿಕ್ಷಕರೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಿದ್ದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಸಂತಸ ವ್ಯಕ್ತಪಡಿಸಿದರು. "ಇದು ನಮಗೆ ಸಿಕ್ಕಿರುವ ಸುವರ್ಣಾವಕಾಶ. ಸಚಿವರು ನಮ್ಮ ಶಾಲೆಗೆ ಆಗಮಿಸಿ ಶಿಕ್ಷಕರ ದಿನಾಚರಣೆಯ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದು ನಿಜಕ್ಕೂ ಖುಷಿಯ ಸಂಗತಿ ಶಿಕ್ಷಣ ಸಚಿವರಿಂದ ಶಿಕ್ಷಕರಿಗೆ ಸಿಕ್ಕ ದೊಡ್ಡ ಗೌರವ ಇದು ಎಂದು ಭಾವಿಸುತ್ತೇನೆ" ಎಂದು ಹೇಳಿದರು.

ಕಾರ್ಯಕ್ರದಲ್ಲಿ ಮಾತನಾಡಿದ, 9ನೇ ತರಗತಿ ವಿದ್ಯಾರ್ಥಿನಿ ಸಾಭಮ್ಮ ಮಾತನಾಡಿ, "ಖಾಸಗಿ ಶಾಲೆ ಗಳಿಗಿಂತ ನಮ್ಮ ಸರ್ಕಾರಿ ಶಾಲೆ ಯಾವುದಕ್ಕೂ ಕಡಿಮೆಯಿಲ್ಲ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ. ನಮಗೆ ಯಾವುದೇ ಕೊರತೆಯಿಲ್ಲ" ಎಂದು ಹೆಮ್ಮೆಯಿಂದ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಶಿಕ್ಷಣ ಕ್ಷೇತ್ರದ ಕೊಡುಗೆಯನ್ನು ಸ್ಮರಿಸಿದರು. ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಪ್ರೋತ್ಸಾಹಿಸಲು ಅವರು ದಿನಕ್ಕೆ ಒಂದು ರೂಪಾಯಿ ನೀಡುವ ಮೂಲಕ ವಿದ್ಯಾರ್ಥಿ ಗಳನ್ನು ಶಾಲೆಯಲ್ಲಿ ಉಳಿಸಿಕೊಳ್ಳಲು ಉತ್ತೇಜನ ನೀಡಿದ್ದನ್ನು ನೆನಪಿಸಿಕೊಂಡರು.ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, "ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿಯ ಶಿಕ್ಷಕರು ಹೇಗೆ ಕಲಿಸು ತ್ತಿದ್ದಾರೆ ಎಂಬುದು ಇಲ್ಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸು ವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ" ಎಂದು ಶಿಕ್ಷಕರಿಗೆ ಹೇಳಿದರು.ಸರ್ಕಾರಿ ಶಾಲೆಯ ಬಗ್ಗೆ ಮಾಧ್ಯಮದಲ್ಲಿ ಟೀಕೆ-ಟಿಪ್ಪಣಿ ಬರು ತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ ಶಾಲೆಗಳ ಸಾಧನೆ, ಇಲ್ಲಿರುವ ಸೌಕರ್ಯಗಳನ್ನು ರಾಜ್ಯ ಜನರಿಗೆ ತೋರಿಸುವುದಿಲ್ಲ. ಈ ಶಾಲೆ ದೆಹಲಿಯಲ್ಲಿನ ಸರ್ಕಾರಿ ಶಾಲೆಗಳಿಗಿಂತಲೂ ಉತ್ತಮವಾಗಿದೆ"ಎಂದು ಸಚಿವರು ಹೇಳಿದರು.

"ನಮ್ಮ ಸರ್ಕಾರ ಯಾವತ್ತೂ ಶಿಕ್ಷಕರನ್ನು ಮರೆ ಯುವುದಿಲ್ಲ. ಮನುಷ್ಯನಾಗಿ ನನಗೆ ಜೀವನದಲ್ಲಿ ಸಾಧನೆ ಮಾಡಲು ದಾರಿ ತೋರಿಸಿದವರು ಶಿಕ್ಷಕರು. ಹೀಗೆ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿರುವ ನಿಮ್ಮನ್ನು ನಾನು ನೋಡುವುದೇ ನನ್ನ ಭಾಗ್ಯ" ಎಂದು ಭಾವುಕರಾಗಿ ಹೇಳಿದರು.

ಶಿಕ್ಷಕರು ಹಲವು ವಿಚಾರಗಳನ್ನು ತಮ್ಮ ಗಮನಕ್ಕೆ ತಂದಿದ್ದು, ನಿವೃತ್ತರಾದ ಶಿಕ್ಷಕರು ಆಸಕ್ತಿಯಿಂದ ಮತ್ತೆ ಶಿಕ್ಷಣ ಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ವನ್ನು ಕೇಳಿದ್ದಾರೆ. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.ರಾಜ್ಯದಲ್ಲಿ ಸುಮಾರು 46 ಸಾವಿರ ಶಾಲೆಗಳಿದ್ದು, ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳ ನ್ನು ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ರಾಜ್ಯದ ಮಾದರಿ ಶಾಲೆಗಳನ್ನಾಗಿ ರೂಪಿಸಲಾಗುವುದು. ಶಿಕ್ಷಣದ ಗುಣ ಮಟ್ಟ, ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.ಶಾಲಾ ಮಕ್ಕಳಿಗೆ ಬಿಸಿಯೂಟದಂತಹ ಮಹತ್ವದ ಯೋಜನೆಗಳನ್ನು ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಕೊಡುಗೆಯನ್ನೂ ಸಚಿವರು ಸ್ಮರಿಸಿದರು. ನಮ್ಮ ತಂದೆ ಅವರು ಜಾರಿ ಮಾಡಿದ್ದ ಶಾಲೆಗೆ ಹಾಜರಾಗುವ ಮಕ್ಕಳಿಗೆ ದಿನಕ್ಕೆ 1 ರೂ. ಕೊಡುವ ʻಅಕ್ಷಯʼ ಯೋಜನೆಯೇ ಮುಂದೆ ಬಿಸಿಯೂಟ ಯೋಜನೆ ಜಾರಿಗೆ ಬರಲು ಬಳಸಿಕೊಂಡರು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. 1ರಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳನ್ನು ನೀಡಲಾಗುವುದು. ಸಾಧ್ಯ ಆದರೆ ಇದೇ ವರ್ಷದಿಂದ ಜಾರಿ ಮಾಡುತ್ತೇವೆ. ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯ ಪುಸ್ತಕಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

"ಬೆಸ್ಟ್ ಗುರುಗಳು ಸಿಗುವುದು ಸರ್ಕಾರಿ ಶಾಲೆಗಳಲ್ಲಿ ಮಾತ್ರ. ಉಳಿದ ಶಿಕ್ಷಕರ ಬಗ್ಗೆಯೂ ನನಗೆ ಗೌರವ ವಿದೆ. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರು ನೀಡುತ್ತಿ ರುವ ಸೇವೆ ಅತ್ಯಂತ ಮಹತ್ವದ್ದು" ಎಂದು ಸಚಿವರು ಹೇಳಿದರು.ಕಾರ್ಯಕ್ರಮದ ಅಂತ್ಯದಲ್ಲಿ ಸಚಿವ ಮಧು ಬಂಗಾರಪ್ಪ ಅವರು ನೆರೆದಿದ್ದ ಎಲ್ಲ ಶಿಕ್ಷಕರಿಗೂ ಗುಲಾಬಿ ಹೂ ನೀಡಿ ಶಿಕ್ಷಕರ ದಿನಾಚರಣೆಯ ಶುಭಾ ಶಯಗಳನ್ನು ಕೋರಿದರು.ಬಳಿಕ ಆರ್ ಕೆ ಹೆಗ್ಗಡೆ ನಗರದಲ್ಲಿನ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಮತ್ತು ಸರ್ಕಾರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸಚಿವರು ಭೇಟಿ ನೀಡಿ ಶಿಕ್ಷಕರಿಗೆ ಶಿಕ್ಷಕರಿಗೆ ಶುಭಾಶಯ ತಿಳಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯಾಲಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಶಿಕ್ಷಕ.....ರಾಜ್ಯದ ಸಮಸ್ತ ಶಿಕ್ಷಕರಿಗೆ ಸಂದ ಗೆಲುವು ಇಲಾಖೆಗೆ ಮುಖ ಭಂಗ.....ರಾಜ್ಯದ ಸಮಸ್ತ BLO ಶಿಕ್ಷಕರಿಗೆ ಶುಭ ಸುದ್ದಿ.....ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.....ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ OPS ಭಾಗ್ಯ ಮಾಹಿತಿ ಅಧಿಕೃತ ಹಂಚಿಕೊಂಡ DCM..... ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಎಷ್ಟು ನೌಕರರು ಬರುತ್ತಾರೆ ಯಾರಿಗೆ ಯಾರಿಗೆ ಅನುಕೂಲ ಕಂಪ್ಲೀಟ್ ಮಾಹಿತಿ.....ಶುರುವಾಯಿತು ಲೆಕ್ಕಾಚಾರ.....ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಭಾಗ್ಯ ಶಿಕ್ಷಕರಿಗೆ ಮತ್ತೊಂದು ತಲೆನೋವು.....ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ಭರ್ಜರಿ ಗ್ಯಾರಂಟಿ ಯೋಜನೆ.....ಈಡೇರಲಿದೆ ಬಹುದಿನದ ಬೇಡಿಕೆ.....ಶಿಕ್ಷಕರ ದಿನಾಚರಣೆಯಂದು ಇದೆಂಥಾ ಅವಘಡ.....ತಪ್ಪಿತು ದೊಡ್ಡ ದುರಂತ.....ಶಿಕ್ಷಕರ ದಿನಾಚರಣೆ ದಿನದಂದೇ ಹೊಸ ಬೇಡಿಕೆ ಇಟ್ಟ ಶಿಕ್ಷಕರು.....ದೇಶದ ಎಷ್ಟು ಸರ್ಕಾರಿ ಶಾಲೆಗಳಲ್ಲಿ ಎಷ್ಟು ಶಿಕ್ಷಕರಿದ್ದಾರೆ.....ಕರ್ನಾಟಕದಲ್ಲಿ ಶಿಕ್ಷಕರ ಸಂಖ್ಯೆ ಎಷ್ಟಿದೆ ಗೊತ್ತಾ ಒಂದಿಷ್ಟು ಕುತೂಹಲ ಮಾಹಿತಿ ನಿಮಗಾಗಿ.....ಶಿಕ್ಷಕರ ದಿನದಂದೇ ರಾಜ್ಯದ ಶಿಕ್ಷಕರಿಗೆ ಗಿಫ್ಟ್.....