LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮೀಸಲಾತಿ ಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿವೆ ನೋಡಿ.....

ಬೆಂಗಳೂರು -

ಮೀಸಲಾತಿ ಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿವೆ ನೋಡಿ ಹೌದು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿ ರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಇಂಜಿನಿಯ ರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾ ಸೀಟುಗಳ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಪ್ರತ್ಯೇಕ ಮೀಸ ಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಸೋಮವಾರ, ಸೆಪ್ಟೆಂಬರ್‌ 7ರಂದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026 ರ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಕರಡು ನಿಯಮಕ್ಕೆ ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಇದುವರೆಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸರ್ಕಾರಿ ಕೋಟಾ ಸೀಟುಗಳ ಪ್ರವೇಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಒಟ್ಟಾರೆ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿತ್ತು ಹೊಸ ಪ್ರಸ್ತಾವಿತ ತಿದ್ದುಪಡಿಯಂತೆ ಈ ಶೇ.15ರ ಮೀಸಲಾತಿಯನ್ನು ಎರಡು ವಿಭಾಗಗ ಳಾಗಿ ವಿಂಗಡಿಸಲಾಗುತ್ತದೆ.ಸರ್ಕಾರಿ ಶಾಲೆಗಳಲ್ಲಿ ಓದಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.7.5 ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಸೇರಿ ದಂತೆ ಯಾವುದೇ ಶಾಲೆ ಅಥವಾ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.7.5. ಹೀಗಾಗಿ ಗ್ರಾಮೀಣ ಮೀಸಲಾತಿಯ ಒಟ್ಟು ಪ್ರಮಾಣ ಶೇ.15 ರಷ್ಟೇ ಮುಂದುವರಿಯಲಿದ್ದು ಅದರಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಶೇ.7.5ರಷ್ಟು ಸೀಟುಗಳು ಲಭ್ಯವಾಗಲಿವೆ.

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಶಾಲೆ ಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಗೆ ಈ ಶೇ.7.5ರಷ್ಟು ಮೀಸಲಾತಿ ಅನ್ವಯವಾಗಲಿದೆ ಎಂದು ಕರಡು ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ.ಇದರಿಂದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಆರಂಭ ದಿಂದಲೇ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಪ್ರತ್ಯೇಕ ಅವಕಾಶ ದೊರೆಯಲಿದೆ.ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಿಗೆ ಅನ್ವಯ

ಇನ್ನೂ ಈ ಮೀಸಲಾತಿ ಕರ್ನಾಟಕದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಕ್ಕೆ ಅನ್ವಯವಾಗಲಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗಲಿದೆ. ಗ್ರಾಮೀಣ ಮತ್ತು ಬಡ ಕುಟುಂಬಗಳ ಮಕ್ಕಳು ನಗರ ಪ್ರದೇಶದ ವಿದ್ಯಾರ್ಥಿ ಗಳೊಂದಿಗೆ ಸ್ಪರ್ಧಿಸುವ ಸಂದರ್ಭದಲ್ಲಿ ಎದುರಿಸುವ ಹಲವು ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಸರ್ಕಾರ ಇದೀಗ ಕರಡು ನಿಯಮವನ್ನು ಪ್ರಕಟಿಸಿ ರುವುದರಿಂದ ಇದು ತಕ್ಷಣವೇ ಅಂತಿಮ ನಿಯಮ ವಾಗಿ ಜಾರಿಗೆ ಬಂದಿಲ್ಲ. ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಸಾರ್ವಜ ನಿಕರು ಅಥವಾ ಬಾಧಿತ ವ್ಯಕ್ತಿಗಳು ತಮ್ಮ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ, ಎಂ.ಎಸ್. ಬಿಲ್ಡಿಂಗ್‌, ಡಾ. ಬಿ.ಆರ್. ಅಂಬೇಡ್ಕರ್‌ ವೀಧಿ,ಬೆಂಗಳೂರು-560001 ವಿಳಾಸಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸ್ವೀಕರಿಸಲಾದ ಸಲಹೆ ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿಯಮಗಳನ್ನು ಅಂತಿಮಗೊಳಿಸಲಿದೆ.
Karnataka government

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿ ಗಳ ಉನ್ನತ ಶಿಕ್ಷಣದ ಕನಸಿಗೆ ನೆರವಾಗುವ ಉದ್ದೇಶ ದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸು ವುದಾಗಿ ಘೋಷಿಸಿದ್ದರು.ಈ ಘೋಷಣೆಯ ಬೆನ್ನಲ್ಲೇ ಇದೀಗ ಉನ್ನತ ಶಿಕ್ಷಣ ಇಲಾಖೆ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಿಸಿದ ಕರಡು ನಿಯಮ ವನ್ನು ಪ್ರಕಟಿಸಿದೆ.

ಸರ್ಕಾರದ ಈ ಪ್ರಸ್ತಾವನೆ ಜಾರಿಗೆ ಬಂದರೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾ ಸೀಟುಗಳಲ್ಲಿ ಪ್ರತ್ಯೇಕ ಅವಕಾಶ ದೊರೆಯಲಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದು ಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ವಿಸ್ತರಿಸುವುದು ಮತ್ತು ಸರ್ಕಾರಿ ಶಾಲೆ ಗಳಿಂದ ವೃತ್ತಿಪರ ಶಿಕ್ಷಣದತ್ತ ಸಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಡ್. ಶಿಕ್ಷಕರಿಗೆ ಬಿಗ್ ರಿಲೀಫ್.....9ನೇ ವಯಸ್ಸಲ್ಲಿ ಶಾಲೆ ಬಿಟ್ಟಿದ್ದ ಅಜ್ಜಿಗೆ 105ನೇ ವಯಸ್ಸಿನಲ್ಲಿ ಗಣಿತಕ್ಕೆ 100ಕ್ಕೆ 100 ಅಂಕ.....ಇದು ಭಗೀರಥಿ ಅಮ್ಮನ ಯಶಸ್ಸಿನ ಕಥೆ.....KAS ಅಧಿಕಾರಿಗಳ ವರ್ಗಾವಣೆ ಮತ್ತೆ ಆರು ಅಧಿಕಾರಿಗಳ ವರ್ಗಾವಣೆ.....ಮೀಸಲಾತಿ ಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಏನೆಲ್ಲಾ ಸೌಲಭ್ಯಗಳು ಸಿಗಲಿವೆ ನೋಡಿ.....ಶಿಕ್ಷಕರ ಮನವಿ ಗೆ ಸ್ಪಂದಿಸಿದ CM ಬಹುದಿನಗಳ ಬೇಡಿಕೆ ಗೆ ಸ್ಪಂದಿಸಿದ ನಾಡ ದೊರೆ.....ಶಿಕ್ಷಕರ ನೇಮಕಾತಿ ಮಹತ್ವದ ಅಪ್ಡೇಟ್ ಮಾಹಿತಿ.....ರಾತ್ರಿ ಈ ಒಂದು ಹಣ್ಣು ತಿಂದರೆ ಸಾಕು ಡೊಳ್ಳು ಹೊಟ್ಟೆ ಕರಗುತ್ತದೆ..ರಾಜ್ಯದಲ್ಲಿ ಹೆಚ್ಚುವರಿ KPS ಶಾಲೆಗಳು ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.....OPS ಜಾರಿಯಾದರೆ ರಾಜ್ಯದ ಬೊಕ್ಕಸಕ್ಕೆ ಎಷ್ಟು ಹೊರೆ ಒಂದಿಷ್ಟು ಮಾಹಿತಿ.....IPS ಅಧಿಕಾರಿಗಳ ವರ್ಗಾವಣೆ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಸರ್ಜರಿ......